ಸಂಗ್ರಹ ಚಿತ್ರ 
ರಾಜ್ಯ

ನಗರದ ರಸ್ತೆಗಳ ಗುಂಡಿ ಮುಚ್ಚಿದ ಬಿಬಿಎಂಪಿ: ಗುಣಮಟ್ಟ ಪರಿಶೀಲನೆಗೆ ಆಯೋಗ ರಚಿಸಿದ ನ್ಯಾಯಾಲಯ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಲ್ಲಿಯವರೆಗೂ ಎಷ್ಟರ ಮಟ್ಟಿಗೆ ರಸ್ತೆ ಗುಂಡಿಗಳನ್ನು ಮುಚ್ಚಿದೆ ಎಂಬುದನ್ನು ಪರಿಶೀಲನೆ ನಡೆಸಲು ಹೈಕೋರ್ಟ್ ಸೋಮವಾರ ಆಯೋಗವೊಂದನ್ನು ನೇಮಕ ಮಾಡಿದೆ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಲ್ಲಿಯವರೆಗೂ ಎಷ್ಟರ ಮಟ್ಟಿಗೆ ರಸ್ತೆ ಗುಂಡಿಗಳನ್ನು ಮುಚ್ಚಿದೆ ಎಂಬುದನ್ನು ಪರಿಶೀಲನೆ ನಡೆಸಲು ಹೈಕೋರ್ಟ್ ಸೋಮವಾರ ಆಯೋಗವೊಂದನ್ನು ನೇಮಕ ಮಾಡಿದೆ. 
ನಗರದಲ್ಲಿನ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು ನೋವುಗಳಿಗೆ ಈಡಾಗುತ್ತಿದ್ದಾರೆಂದು ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದಿನೇಸ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಡಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಮುಚ್ಚಿರುವ ರಸ್ತೆ ಗುಂಡಿಗಳನ್ನು ಪರಿಶೀಲನೆ ನಡೆಸಲು  ಮಿಲಿಟರಿ ಇಂಜಿನಿಯರಿಂಗ ಸರ್ವೀಸಸ್ ನ ಮುಖ್ಯಸ್ಥರಾದ ದಿನೇಶ್ ಅಗರ್ವಾಲ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಜಿ ಉಮಾ ನೇತೃತ್ವದಲ್ಲಿ ನ್ಯಾಯಾಲಯದ ಆಯೋಗ ನೇಮಿಸಿ ಆದೇಶಿಸಿದರು. 
ಅಲ್ಲದೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಹಾಗೂ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಆಯೋಗಕ್ಕೆ ಸಹಕಾರ ನೀಡುವಂತೆಯೂ ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಬಿಬಿಎಂಪಿ ಮಲ್ಲೇಶ್ವರಂ ನ 7 ವಾರ್ಡ್ ಗಳು, ಮಹಾಲಕ್ಷ್ಮೀ ಲೇ ಔಟ್ ಹಾಗೂ ಯಲಹಂಕದ 4 ವಾರ್ಡ್ ಗಳು ಗುಂಡಿ ಮುಕ್ತ ರಸ್ತೆಗಳೆಂದು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. 
ಇದೇ ವೇಳೆ ನಗರ ಪೊಲೀಸರ್ ಆಯುಕ್ತರಿಗೂ ಸೂಚನೆ ನೀಡಿರುವ ನ್ಯಾಯಾಲಯ, ಆಯೋಗ ಭೇಟಿ ನೀಡುವ ರಸ್ತೆಗಳಲ್ಲಿ ಸೂಕ್ತ ನಿರ್ವಹಣೆಗಳನ್ನು ಕಲ್ಪಿಸುವಂದೆ ಹಾಗೂ, ಬಿಬಿಎಂಪಿ ನಡೆಸುತ್ತಿರುವ ಕಾರ್ಯಗಳನ್ನು ಗಮನಿಸುತ್ತಿರುವಂತೆ ಮತ್ತು ಈ ಕುರಿತು ಮಂಗಳವಾರ ವರದಿ ಸಲ್ಲಿಸುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!