ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಇನ್ನು 2 ದಿನ ಜೈಲೇ ಗತಿ!
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿ ಆದೇಶವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಸೆ.26 ವರೆಗೆ ಕಾಯ್ದಿರಿಸಿದೆ.
ಜಾಮೀನು ಅರ್ಜಿ ಆದೇಶ ಕಾಯ್ದಿರಿಸಲಾಗಿರುವ ಹಿನ್ನೆಲೆಯಲ್ಲಿ ನಟ ವಿಜಯ್ ಇನ್ನೂ 2 ದಿನಗಳ ಕಾಲ ಜೈಲಿನಲ್ಲೇ ಇರಬೇಕಾಗಿದೆ. ಮ್ಕ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನಟ ದುನಿಯಾ ವಿಜಯ್ ಪರ ವಾದ ಮಂಡಿಸಿರುವ ವಕೀಲರು, ತಮ್ಮ ಕಕ್ಷಿದಾರರ ವಿರೌದ್ಧ ಪೊಲೀಸರು ಸೆಕ್ಷನ್ .326 ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಕ್ಕೆ ಆಕ್ಷೇಪಿಸಿದ್ದಾರೆ.
ನಡೆದಿರುವ ಘಟನೆಯಲ್ಲಿ ಮಾರಕಾಸ್ತ್ರಗಳು ಬಳಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಿಜಯ್ ಪರ ವಾದ ಮಂಡಿಸಿರುವ ವಕೀಲರು ಹೇಳಿದ್ದಾರೆ. ವಿಜಯ್ ಗೆ ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಇದು ಗಂಭೀರ ಪ್ರಕರಣವಗಿದ್ದು ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದಾರೆ. ನ್ಯಾಯಾಲಯ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ.