ಪರಮೇಶ್ವರ್ 
ರಾಜ್ಯ

ನಾನು ಝೀರೋ ಟ್ರಾಫಿಕ್ ವ್ಯವಸ್ಥೆ ಪಡೆದರೆ ನಿಮಗೆ ಹೊಟ್ಟೆ ಉರಿಯೇ? ಡಿಸಿಎಂ

: ಝಿರೋ ಟ್ರಾಫಿಕ್ ವ್ಯವಸ್ಥೆ ನನಗೂ ಇದೆ, ಹೀಗಾಗಿ ಬಳಸಿಕೊಳ್ಳುತ್ತಿದ್ದೇನೆ. ನಾನು ಝಿರೋ ಟ್ರಾಫಿಕ್ ತಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಉರಿಯೇ ...

ಬೆಂಗಳೂರು: ಝಿರೋ ಟ್ರಾಫಿಕ್ ವ್ಯವಸ್ಥೆ ನನಗೂ ಇದೆ, ಹೀಗಾಗಿ ಬಳಸಿಕೊಳ್ಳುತ್ತಿದ್ದೇನೆ. ನಾನು ಝಿರೋ ಟ್ರಾಫಿಕ್ ತಗೆದುಕೊಳ್ಳುವುದು  ಮಾಧ್ಯಮಗಳಿಗೆ ಹೊಟ್ಟೆ ಉರಿಯೇ ಎಂದು  ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ,
ಕೊಡವ ಸಮಾಜ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್ ಬಳಿ ಫೀಲ್ಡ್ ಮಾರ್ಷಲ್ ಕಾರಿಯಪ್ಪರವರ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಪರಮೇಶ್ವರ್ ರವರನ್ನು ಆಹ್ವಾನಿಸಲಾಗಿತ್ತು. ಇಂದು ಸಹ ಝಿರೋ ಟ್ರಾಫಿಕ್ ಮೂಲಕವೇ ಕಾರ್ಯಕ್ರಮಕ್ಕೆ ಡಿಸಿಎಂ ಆಗಮಿಸಿದ್ದರು.
ಝಿರೋ ಟ್ರಾಫಿಕ್ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗಣ್ಯವ್ಯಕ್ತಿ, ರಾಜ್ಯಪಾಲರು ಹಾಗೂ ಗೃಹ ಸಚಿವರಿಗೂ ಸಹ ಝಿರೋ ಟ್ರಾಫಿಕ್ ಅವಕಾಶ ನೀಡಲಾಗಿದೆ. ಹೀಗಾಗಿ ಇದನ್ನು ನಾನು ಬಳಸಿಕೊಳ್ಳುತ್ತಿದ್ದೇನೆ. ಝಿರೋ ಟ್ರಾಫಿಕ್ ಅಗತ್ಯ ಇದೆ ಎನ್ನುವುದರಿಂದ ಅವಕಾಶ ನೀಡಲಾಗಿದೆ. ಈ ಹಿಂದಿನ ಗೃಹ ಸಚಿವರು ಬೇಡ ಎಂದಿದ್ದರು. ಹಾಗಂತ ನಾನು ಸಹ ಬೇಡ ಎನ್ನಬೇಕಿಲ್ಲ. ನನಗೆ ಇರುವ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!