ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ 
ರಾಜ್ಯ

ನಕ್ಸಲ್, ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ದಕ್ಷಿಣ ರಾಜ್ಯಗಳ ಪೊಲೀಸರ ಸಮನ್ವಯತೆ ಅಗತ್ಯ- ಪರಮೇಶ್ವರ್ !

ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ದಕ್ಷಿಣ  ರಾಜ್ಯಗಳ ಪ್ರಾದೇಶಿಕ ಪೊಲೀಸರ ಸಮನ್ವಯತೆ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಗಳ ನಡುವೆ ಸಮರ್ಪಕ ಸಮನ್ವಯತೆ ಇಲ್ಲದಿದ್ದರೆ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.

ಸೈಬರ್ ಅಪರಾಧ, ಮಾದಕ ವಸ್ತು, ಮಾನವ ಕಳ್ಳಸಾಗಣೆಗೆ ಎಲ್ಲೆ ಇಲ್ಲ. ಮಾಹಿತಿ ಹಾಗೂ ಗುಪ್ತಚರದ ಮೂಲಕ  ಸಮನ್ವಯತೆ ಸಾಧಿಸಿ ಕಾನೂನು ರಕ್ಷಿಸಬೇಕಾಗದ ಅಗತ್ಯತೆ  ಹೆಚ್ಚಾಗಿದೆ. ಪೊಲೀಸರ ಕೆಲಸ ಹಾಗೂ ಜೀವನಮಟ್ಟವನ್ನು ಸುಧಾರಿಸಬೇಕಾಗಿದೆ ಎಂದು ಹೇಳಿದರು.

 ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬರ್, ಲಕ್ಷದ್ವೀಪಗಳ ಐಜಿ ಡಿಜಿಪಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಒಂದು ತಿಂಗಳಿಗೆ ಒಂದು ಬಾರಿ ಪ್ರಾದೇಶಿಕ ಪೊಲೀಸ್ ಸಮನ್ವಯ ಸಮಿತಿ ಸಭೆ ಸೇರಲಿದ್ದು,  ಅಂತರಾಜ್ಯಕ್ಕೆ ಸಂಬಂಧಿಸಿದಂತೆ ಅಪರಾಧಗಳು, ನಕ್ಸಲ್, ಗಡಿ ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT