ತಿರುಚಂದೂರು ದೇವಾಲಯದಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ 
ರಾಜ್ಯ

4 ತಿಂಗಳಲ್ಲಿ 40 ದೇಗುಲ ಯಾತ್ರೆ: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಹಿಂದಿನ ರಹಸ್ಯವೇನು?

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ದೇಗುಲ ಯಾತ್ರೆ ಇನ್ನೂ ಮುಗಿದಿಲ್ಲ, ನಿನ್ನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ತಿರುಚೆಂದರ್ ನಲ್ಲಿರುವ ...

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ದೇಗುಲ ಯಾತ್ರೆ ಇನ್ನೂ ಮುಗಿದಿಲ್ಲ, ನಿನ್ನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ತಿರುಚೆಂದರ್ ನಲ್ಲಿರುವ ಮುರುಗ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದಾರೆ. 
ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾಗಿದೆ,. ಈ ಸಮಯದಲ್ಲಿ ಸಿಎಂ ಸುಮಾರು 40 ದೇವಾಲಯಗಳಿಗೆ ಭೇಟಿ ನೀಡಿದ್ದಾರೆ,  ಕಳೆದ ವಾರ ಶೃಂಗೇರಿಯ ಶಾರದಾಂಬ ದೇವಾಲಯಕ್ಕೆ ತೆರಳಿ ಹಲವು ಪೂಜೆ ಹೋಮ ಮಾಡಿಸಿದ್ದರು.
ಕಳೆದ ವರ್ಷ ಸೆಪ್ಟಂಬರ್ 23 ರಂದು ಕುಮಾರಸ್ವಾಮಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು,  ಹೀಗಾಗಿ ಗುರುವಾರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ಅವರ ಹಿತೈಷಿಗಳು ಪುರಾತನ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರೇ ಆರೋಗ್ಯ ಸುಧಾರಿಸುವುದಾಗಿ ಸಲಹೆ ನೀಡಿದ್ದರು, ಹೀಗಾಗಿ ಕುಮಾರ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ,
ಗುರುವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಪತ್ನಿ ಅನಿತಾ ಹಾಗೂ ಪುತ್ರ ನಿಖಿಲ್ ಜೊತೆ ತೂತುಕುಡಿಗೆ ತೆರಳಿದ್ದ ಕುಮಾರ ಸ್ವಾಮಿ ಮುರುಗನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಕುಮಾರಸ್ವಾಮಿ ಅವರಿಗೆ ಆಯುರಾರೋಗ್ಯ ನೀಡಬೇಕೆಂದು ಕುಟುಂಬಸ್ಥರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಿಜೆಪಿಯ ತೀವ್ರ ವಾಗ್ದಾಳಿಯ ನಡುವೆಯೂ ಕುಮಾರ ಸ್ವಾಮಿ ತಮ್ಮ ದೇಗುಲ ಯಾತ್ರೆ ಮುಂದುವರಿಸಿದ್ದಾರೆ,  ರಾಜ್ಯದಲ್ಲಿ ಜನ ಪ್ರವಾಹ, ಭೂ ಕುಸಿತ ಮತ್ತು ಬರ ದಿಂದ ಕಂಗೆಟ್ಟಿದ್ದಾರೆ, ಆದರೆ ಸಿಎಂ ಕುಮಾರಸ್ವಾಮಿ ಅಧಿಕಾರಕ್ಕಾಗಿ ದೇವಾಲಯ ಸುತ್ತುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶಾಸನಬದ್ಧ ಕಾರ್ಯವಿಧಾನ ಅನುಸರಿಸದೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡುವಂತಿಲ್ಲ: ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಕೆಂಡ..!

Flydubai ವಿಮಾನ ಹೈಜಾಕ್'ಗೆ ಯತ್ನ; ಕಾಕ್‌ಪಿಟ್‌ನಲ್ಲೇ ಡೆಡ್ಲಿ ಫೈಟ್; 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..!

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಳ, ವಿಮಾನ ಇಂಧನವೂ ದುಬಾರಿ..!

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ, ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!

ಡಿಕೆಶಿ ಕನಸಿನ ಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ, ಎದುರಾಯ್ತು ಕಾನೂನು ಸಂಕಷ್ಟ..!