ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ನಡು ಬೀದಿಯಲ್ಲೇ ಜೆಡಿಎಸ್ ಕಾರ್ಪೋರೇಟರ್ ಭೀಕರ ಕೊಲೆ

ಖಾರದ ಪುಡಿ ಕಣ್ಣಿಗೆರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಕಾರ್ಪೋರೇಟರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಖಾರದ ಪುಡಿ ಕಣ್ಣಿಗೆರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಕಾರ್ಪೋರೇಟರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಭಾನುವಾರ ಬೆಳಿಗ್ಗೆ  ತುಮಕೂರಿನ ಬಟವಾಡಿ ಬ್ರಿಡ್ಜ್ ಸಮೀಪ ನಡೆದ ಘಟನೆಯಲ್ಲಿ ತುಮಕೂರು ನಗರ ಪಾಲಿಕೆ ಸದಸ್ಯ ಎಚ್.ರವಿಕುಮಾರ್ ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ ಎದ್ದು ಮನೆ ಸಮೀಪದ ಕ್ಯಾಂತೀನ್ ನಲ್ಲಿ ಟೀ ಕುಡುಯುವಾಗ ಳೆ ಟಾಟಾ ಏಸ್‌ನಲ್ಲಿ ಬಂದ 7 ಜನ ದುಷ್ಕರ್ಮಿಗಳು ರವಿಕುಮಾರ ಅವರ ಮೇಲೆ ಖಾರದ ಪುಡಿ ಎರಚಿದ್ದಾರೆ.ಬಳಿಕ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ರವಿಕುಮಾರ್ ಅವರ ತಲೆ ಭಾಗಕ್ಕೆ ಬಲವಾಗಿ ಹೊಡೆದು ಕೊಲ್ಲಲಾಗಿದೆ. 
ಕಾರಿನಲ್ಲಿದ್ದ ಏಳು ಜನರ ಪೈಕಿ ಐವರು ಕೆಳಗಿಳಿದು ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ದುಷ್ಕರ್ಮಿಗಳು ರವಿಕುಮಾರ ಜತೆಗಿದ್ದ ಟೈಲರ್ ಕಿಟ್ಟಣ್ಣ ಎನ್ನ್ನುವವರ ಮೇಲೆ ಸಹ ಹಲ್ಲೆಗೆ ಯತ್ನಿಸಿದ್ದಾರೆ. ಆದರೆ ಕಿಟ್ಟಣ್ನ ಸ್ಥಳದಿಂದ ತಪ್ಪಿಸಿಕೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ರವಿಕುಮಾರ್ ತುಮಕೂರು [ಪ್ರದೇಶದಲ್ಲಿ ಪ್ರಭಾವಿ ನಾಯಕರಾಗಿದ್ದರು. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಗಳಿಸಿದ್ದಲ್ಲದೆ ಅಮಾಜಿ ಮೇಯರ್ ಸಹ ಆಗಿದ್ದರು,
ಹಂತಕರು ಯಾರು, ಹತ್ಯೆಗೆ ಕಾರಣವೇನು ಎನ್ನುವುದು ತನಿಖೆಯಿಂದ ಇನ್ನಷ್ಟೇ ಬಹಿರಂಗವಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!