ರಾಜ್ಯ

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಜಾಮೀನು ಕೋರಿ ಗಣೇಶ್ ಅರ್ಜಿ, ಬಿಡದಿ ಪೊಲೀಸರಿಗೆ ನೋಟಿಸ್

Shilpa D
ಬೆಂಗಳೂರು: ಶಾಸಕ ಆನಂದ ಸಿಂಗ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಬಿಡದಿ ಪೊಲೀಸರಿಗೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರು ಜನಪ್ರತಿನಿಧಿಯಾಗಿದ್ದು, ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಳ್ಳಬೇಕಿದೆ. ಆದ್ದರಿಂದ ಅವರಿಗೆ ಜಾಮೀನು ನೀಡಬೇಕು ಎಂದು ಗಣೇಶ್ ಪರ ವಕೀಲರು ಮನವಿ ಮಾಡಿದರು. 
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಯನ್ನು ಏ.8 ಕ್ಕೆ ಮುಂದೂಡಿತು. ಈ ಹಿಂದೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ, ಗಣೇಶ್ ಅರ್ಜಿಯನ್ನು ತಿರಸ್ಕರಿಸಿತ್ತು. 
ಇತ್ತೀಚೆಗೆ ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಪಕ್ಷದ ನಾಯಕರು ಈಗಲ್ಟನ್ ರೆಸಾರ್ಟ್‍ಗೆ ಕರೆದೊಯ್ದಿದ್ದರು. ಅಲ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಪರಸ್ಪರ ಹೊಡೆದಾಡಿಕೊಂಡಿದ್ದರು. 
SCROLL FOR NEXT