ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರಿಂದ ಗ್ಯಾಂಗ್ ರೇಪ್

ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ನಡೆದಿದೆ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ನಡೆದಿದೆ

ಕಲಾವತಿ ( ಹೆಸರು ಬದಲಿಸಲಾಗಿದೆ) ಮೇಲೆ ಕಾಮಾಂಧರು ಅತ್ಯಾಚಾರ ನಡೆಸಿದ್ದಾರೆ. ಆಕೆಯ ಕಿರುಚಾಟದಿಂದಾಗಿ ಸ್ಥಳಕ್ಕೆ ಧಾವಿಸಿದ ನೆರೆಹೊರೆಯವರು ಆರೋಪಿಗಳನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

ಹರೀಶ್ ಕುಮಾರ್ (22) ವೆಂಕಟಾಚಲಪತಿ (19) ಮತ್ತು ಬಾಪಿಲ್ ಅಸರುಲ್ಲಾ ಖಾನ್ (22) ಬಂಧಿತ ಆರೋಪಿಗಳು ಇವರೆಲ್ಲರೂ ಕಾಡುಗೋಡಿಯ ನಿವಾಸಿಯಾಗಿದ್ದಾರೆ.ಆರೋಪಿಗಳ ಮೇಲೆ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾತ್ರಿ 8-30ರ ಸುಮಾರಿನಲ್ಲಿ ಬಾಲಕಿ ಹತ್ತಿರದ ಪ್ರಾವಿಷನ್ ಸ್ಟೋರಿಗೆ ಹೋಗುತ್ತಿದ್ದಾಗ ಆಕೆಯನ್ನು ಹರೀಶ್  ಹಿಂಬಾಲಿಸಿದ್ದು, ಮಾತಾನಾಡಲು ಬರುವಂತೆ ಕೇಳಿದ್ದಾನೆ. ಅದಕ್ಕೆ ಆಕೆ ನಿರಾಕಿಸಿದ್ದಾಗ ಸ್ನೇಹಿತ ವೆಂಕಟಾಚಲಪತಿಯನ್ನು ಕರೆದಿದ್ದಾನೆ. ನಂತರ ಖಾನ್ ಕೂಡಾ ಸೇರಿಕೊಂಡಿದ್ದಾನೆ ಎಂದು ಡಿಸಿಪಿ ಅಬ್ದುಲ್ ಅಹಾದ್ ತಿಳಿಸಿದ್ದಾರೆ.

ಬಾಲಕಿಯನ್ನು ಹತ್ತಿರದ ಸಾರ್ವಜನಿಕರ ಪ್ರವೇಶವಿಲ್ಲದ ಪ್ರದೇಶವೊಂದಕ್ಕೆ ಕರೆದೊಯ್ದು ಹರೀಶ್ ಹಾಗೂ ವೆಂಕಟಾಚಲಪತಿ ಅತ್ಯಾಚಾರ ನಡೆಸಿದ್ದಾರೆ. ಖಾನ್ ಯಾರೂ ಬಾರದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ಮುಂದೆ ಹೇಳಿದ್ದಾರೆ.
ಸಂತ್ರಸ್ತೆಯನ್ನು ಸರ್ಕಾರಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ವೈದ್ಯರು ಸ್ಪಷ್ಪಪಡಿಸಿದ್ದಾರೆ ಎಂದು ಅಬ್ದುಲ್ ಅಹಾದ್  ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel