ನೀರಿನ ಟ್ಯಾಂಕ್ 
ರಾಜ್ಯ

ಮಂಗಳೂರು: ನೀರಿನ ಟ್ಯಾಂಕ್​ಗೆ ಬಿದ್ದು ಮೂವರು ಮಕ್ಕಳ ದಾರುಣ ಸಾವು

ನೀರಿನ ಟ್ಯಾಂಕಿಗೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿಯಾಗಿರುವ ದಾರುಣ ಘಟನೆ ಬುಧವಾರ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪಾಣಾಜೆ ಸಮೀಪದ ಉಡ್ಡಂಗಳದಲ್ಲಿ ನಡೆದಿದೆ.

ಮಂಗಳೂರು: ನೀರಿನ ಟ್ಯಾಂಕಿಗೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿಯಾಗಿರುವ ದಾರುಣ ಘಟನೆ ಬುಧವಾರ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪಾಣಾಜೆ ಸಮೀಪದ ಉಡ್ಡಂಗಳದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ವಿಶ್ಮಿತಾ(13), ಚೈತ್ರಾ (10) ಹಾಗೂ ಜಿತೇಶ್13)ಎಂದು ಗುರುತಿಸಲಾಗಿದೆ. 
ಈ ಮೂವರು ಮಕ್ಕಳು ಬೆಟ್ಟಂಪಾಡಿಯ ಮಿತ್ತಡ್ಕ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ಆಟವಾಡಲು ಗ್ರಾಮದ ಪಂಚಾಯತ್ ನೀರು ಸರಬರಾಜು ಟ್ಯಾಂಕ್‌ಗೆ ಇಳಿದಿದ್ದರು. ನಂತರ ಮೇಲೆ ಬರಲು ಸಾಧ್ಯವಾಗದೇ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಪುತ್ತೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT