ಸಾಂದರ್ಭಿಕ ಚಿತ್ರ 
ರಾಜ್ಯ

ಹೆಸ್ಕಾಂ ನಿರ್ಲಕ್ಷ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ದುರ್ಮರಣ

ನಿನ್ನೆ ಸಂಜೆ ಭಾರೀ ಮಳೆ ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ಕು ಮಂದಿ ಹಾಗೂ ಎರಡು ಎತ್ತುಗಳು ದಾರುಣವಾಗಿ ...

ಬೆಳಗಾವಿ: ನಿನ್ನೆ ಸಂಜೆ ಭಾರೀ ಮಳೆ ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ಕು ಮಂದಿ ಹಾಗೂ ಎರಡು ಎತ್ತುಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿ. ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ,
ನಿನ್ನೆ ಸಂಜೆ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸಿತ್ತು, ಈ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು, ಇಂದು ಬೆಳಗ್ಗೆ ಜಮೀನಿಗೆ ಮೃತರ ಕುಟುಂಬ ತೆರಳಿತ್ತು, ಈ ವೇಳೆ ತಂತಿ ತುಳಿದು ಸಾವನ್ನಪ್ಪಿದ್ದಾರೆ. ರೇವಪ್ಪ ಕಲ್ಲೋಳಿ, ರತ್ನವ್ವ ಕಲ್ಲೋಳಿ, ಸಚಿನ್ ಹಾಗೂ ಕೃಷ್ಣ ಮೃತ ದುರ್ದೈವಿಗಳು,
ವಿದ್ಯುತ್ ತಂತಿ ಸರಿಪಡಿಸುವಂತೆ  ಹೆಸ್ಕಾಂಗೆ ದೂರು ನೀಡಲಾಗಿತ್ತು, ಆದರು ಜನರ ಮನವಿಗೆ ಹೆಸ್ಕಾಂ ಸ್ಪಂದಿಸಿರಲಿಲ್ಲ, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಬರುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ, ಈ ಸಂಬಂಧ ಕಟಕೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video