ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಬೈಕ್ ಸವಾರರ ಸಾವು

ಶಿವಮೊಗ್ಗದಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ಕಾರು
Srinivasa Murthy VN
Updated On : 12 Apr 2019, 10:00 am
ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ಚೊರಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಬರುತ್ತಿದ್ದ ಸವಾರರು ನೇರವಾಗಿ ಮಾರುತಿ ಓಮ್ನಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಂತೆಯೇ ಬೈಕ್ ಗುದ್ದಿದ ರಭಸಕ್ಕೆ ಓಮ್ನಿ ಕಾರು ಕೂಡ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಅಪಘಾತಕ್ಕೆ ಬೈಕ್ ಸವಾರರ ನಿರ್ಲಕ್ಷ್ಚವೇ ಕಾರಣ ಎಂದು ಹೇಳಲಾಗಿದ್ದು, ಓಮ್ನಿ ಕಾರು ಕೂಡ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

Advertisement

Advertisement

ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement