ಮಂಡ್ಯ: ಖಾಸಗಿ ಬಸ್ ನ ಇಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಸಂಪೂರ್ಣ ಬಸ್ ಹೊತ್ತಿ ಉರಿದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇರಳದ ವಯನಾಡ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗಿನ ಜಾವ ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸಮೀಪ ಬರುವಾಗ ಬಸ್ ಇಂಜಿನ್ ನಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿದೆ,
ತಕ್ಷಣ ಜಾಗೃತನಾದ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾನೆ. ಈ ಮೂಲಕ 20ಕ್ಕೂ ಹೆಚ್ಚು ಪ್ರಯಾಣಿಕರ ಜೀವ ರಕ್ಷಿಸಿದ್ದಾರೆ.
ಅವಘಡದಲ್ಲಿ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರ ಲಗೇಜುಗಳಲ್ಲಿ ಬಹುಪಾಲು ಸುಟ್ಟು ಹೋಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics