ರಾಜ್ಯ

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಗೆ ಷರತ್ತುಬದ್ಧ ಜಾಮೀನು

Shilpa D
ಬೆಂಗಳೂರು: ಬಿಡದಿಯ ಈಗಲ್ಟನ್‌ ರೆಸಾರ್ಟ್‌ ರೆಸಾರ್ಟ್‌ನಲ್ಲಿ ಜನವರಿ 20ರ ರಾತ್ರಿ ವಿಜಯಪುರ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತ ಸಾಕ್ಷ್ಯ ಮಾಡದಂತೆ ಹಾಗೂ ಮತ್ತೆ ಇಂಥ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. 2 ಲಕ್ಷ ಬಾಂಡ್ ಹಾಗೀ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ. 
ಜನವರಿ 20ರಂದು ತಡರಾತ್ರಿ ಕುಡಿದ ಅಮಲಿನಲ್ಲಿ   ಗಣೇಶ್‌ ಅವರು ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಆನಂದ್‌ ಸಿಂಗ್‌ ಆಸ್ಪತ್ರೆ ಸೇರಿದ್ದರು. ಜ. 21ರಂದು ಗಣೇಶ್‌ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್‌ ದಾಖಲಾದ ದಿನದಿಂದಲೇ ಗಣೇಶ್‌ ಅವರು ತಲೆಮರೆಸಿಕೊಂಡಿದ್ದರು. 
ಪ್ರಕರಣದಲ್ಲಿ ಆರೋಪಿಯಾಗಿದ್ದ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್ ನಲ್ಲಿ  ಪೋಲೀಸರು ಬಂಧಿಸಿದ್ದರು. 
SCROLL FOR NEXT