ರಾಜ್ಯ

ನಾಳೆಯೇ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ

Lingaraj Badiger
ಬೆಂಗಳೂರು: 2018-19 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ನಾಳೆ ಬೆಳಗ್ಗೆ 11: 30 ಕ್ಕೆ ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಹೇಳಿದ್ದಾರೆ.
ಮೇ 2 ರಂದು ಫಲಿತಾಂಶ ಪ್ರಕಟಿಸುವುದಾಗಿ ತಾವು ಎಲ್ಲಿಯೂ ಹೇಳಿಲ್ಲ. ಅದು ಕೇವಲ ಊಹಾಪೋಹ ಎಂದು ಉಮಾಶಂಕರ್ ಅವರು ಯುಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ನಲ್ಲಿ 12 ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ. ಎಸ್ ಎಂಎಸ್ ಮೂಲಕ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಲಾಗುತ್ತದೆ. ಮೇ 1ರಂದು ಶಾಲೆಗಳ ನೋಟಿಸ್ ಬೋರ್ಡ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಈ ವರ್ಷ 2847 ಪರೀಕ್ಷಾ ಕೇಂದ್ರಗಳಲ್ಲಿ 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 
ಇಲಾಖೆಯ ವೆಬ್ ಸೈಟ್ www.karresults.nic.in ಹಾಗೂ www.kaceb.kar.nic.in
SCROLL FOR NEXT