ರಾಜ್ಯ

ಮೇ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಪತ್ರಕರ್ತ ಹೇಮಂತ್ ಕುಮಾರ್

Nagaraja AB

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪ ಎದುರಿಸುತ್ತಿರುವ ಪತ್ರಕರ್ತ ಹೇಮಂತ್‌ ಕುಮಾರ್‌ ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಕಳೆದ ಮೂರು ದಿನಗಳಿಂದ ಪೊಲೀಸ್‍ ಕಸ್ಟಡಿಯಲ್ಲಿದ್ದ ಹೇಮಂತ್ ಕುಮಾರ್ ಅವರನ್ನು ಇಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಅವರನ್ನು ಮೇ 9ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಹೇಮಂತ್ ಕುಮಾರ್ ಪ್ರಕರಣದಲ್ಲಿ ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಸಬೇಕಿದ್ದು, ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಕೂಡ ನಡೆಯಬೇಕಿರುವುದರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತಿದೆ ಎಂದು ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಆದೇಶ ನೀಡಿದರು. ಮೇ 2ರಂದು ಹೇಮಂತ್ ಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

SCROLL FOR NEXT