ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮದುವೆ, ಸಂಗೀತ ಕಾರ್ಯಕ್ರಮಗಳಿಗೆ ಅವಕಾಶ!

Lingaraj Badiger
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇನ್ಮುಂದೆ ಮದುವೆ, ಸಂಗೀತ ಕಾರ್ಯಕ್ರಮ ಹಾಗೂ ಇತರೆ ಸಮಾರಂಭಗಳಿಗೂ ವೇದಿಕೆಯಾಗಲಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಗೆ 13 ಸಾವಿರ ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿದೆ. ಇದರ ಭಾಗವಾಗಿ ಸಂಗೀತ ಕಾರ್ಯಕ್ರಮ, ಮದುವೆ, ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವಂತಹ ಸ್ಥಳ ನಿರ್ಮಿಸಲಾಗುತ್ತಿದೆ.
ವಿಮಾನ ನಿಲ್ದಾಣದ ಆವರಣದಲ್ಲಿಯೇ ಸುಮಾರು 9 ಸಾವಿರ ಜನರು ಸೇರಬಹುದಾದ ಹಾಲ್ ನಿರ್ಮಾಣವಾಗಲಿದೆ. ಇದಕ್ಕಾಗಿಯೇ 6.3 ಎಕರೆ ಜಾಗವನ್ನು ನಿಗದಿ ಮಾಡಲಾಗಿದೆ.
ಈ ಜಾಗದಲ್ಲಿ ಹೊಸ ಟರ್ಮಿನಲ್​, ರಸ್ತೆ ಅಗಲೀಕರಣ ಸೌಲಭ್ಯ, ಮೆಟ್ರೋ ಸೌಕರ್ಯ, ಕಾರ್ಗೋ ಹಾಗೂ ಬಹುಮಾದರಿ ಸಾರಿಗೆ ಕೇಂದ್ರವನ್ನು ಈ ವಿಸ್ತರಣಾ ಯೋಜನೆಯಲ್ಲಿ ಅಳವಡಿಸಲಾಗಿದೆ. ವಿಮಾನ ನಿಲ್ದಾಣದ ಸೌಲಭ್ಯ ಹೆಚ್ಚಿಸುವ ಜೊತೆಗೆ ಮನರಂಜನಾ ಕಾರ್ಯಕ್ರಮ ನಡೆಸುವ ಬಗ್ಗೆಯೂ ಈಗಾಗಲೇ ಬೇಡಿಕೆ ಬಂದಿದೆ ಎಂದು ಕೆಐಎಬಿ​​ ವಕ್ತಾರರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇನ್ನು ಇದರಿಂದ ಉದ್ಭವವಾಗುವ ಟ್ರಾಫಿಕ್​ ಜಾಮ್​ ಬಗ್ಗೆ ಕೂಡ ಎಚ್ಚರಿಕೆ ವಹಿಸಲಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
SCROLL FOR NEXT