ರಾಜ್ಯ

ಅಲ್ಪಸಂಖ್ಯಾತ ವೋಟ್ ಬ್ಯಾಂಕ್ ಮೇಲೆ ಬಿಜೆಪಿ ಕಣ್ಣು: 5 ಲಕ್ಷ ಅಲ್ಪಸಂಖ್ಯಾತರನ್ನು ಸದಸ್ಯರನ್ನಾಗಿಸುವ ಗುರಿ!

Shilpa D
ಬೆಂಗಳೂರು: ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮತಬ್ಯಾಂಕ್ ಆಗಿ ಪರಿವರ್ತಿಸಿಕೊಂಡಿರುವ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ, ಈ ಬಾರಿ ರಾಜ್ಯದಲ್ಲಿ ಐದು ಲಕ್ಷ ಅಲ್ಪಸಂಖ್ಯಾತರನ್ನು ಬಿಜೆಪಿ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದೆ.
ಬೆಂಗಳೂರಿನಲ್ಲಿಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ಎನ್‌. ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಡೀ ದೇಶದಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಗುರಿ ಹೊಂದಲಾಗಿದೆ. ಇದುವರೆಗೆ ಕೇವಲ 17,764 ಸದಸ್ಯತ್ವ ನೋಂದಣಿ ಮಾತ್ರ ಆಗಿದೆ. ಹಾಗಾಗಿ ಸದಸ್ಯತ್ವ ಅಭಿಯಾನಕ್ಕೆ ವೇಗ ನೀಡಲು ಆಗಸ್ಟ್ 3, 4 ಮತ್ತು 11ರಂದು ನಮ್ಮ ಎಲ್ಲ ಶಾಸಕರು ಮತ್ತು ಪದಾಧಿಕಾರಿಗಳು‌ ಪೂರ್ಣ ಪ್ರಮಾಣದಲ್ಲಿ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 5ರಂದು ಎಲ್ಲಾ ಮೋರ್ಚಾಗಳ ಪ್ರಮುಖರು ಹಾಗೂ ಪ್ರಕೋಷ್ಟಗಳ ಪ್ರಮುಖರ ಸಭೆ ಕರೆಯಲಾಗಿದೆ. ಎಲ್ಲರಿಗೂ ಗುರಿ ನಿಗದಿ ಪಡಿಸಲಾಗುತ್ತದೆ. ಆಗಸ್ಟ್ 8ರಂದು ಸದಸ್ಯತ್ವ ಅಭಿಯಾನದ ಪರಿಶೀಲನಾ ಸಭೆ ನಡೆಯಲಿದ್ದು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಭೆಯ ನೇತೃತ್ವ ವಹಿಸಲಿದ್ದಾರೆ ಎಂದರು.
SCROLL FOR NEXT