ರಾಜ್ಯ

ಶೀಘ್ರದಲ್ಲೇ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ: ಧಾರವಾಡ ಜಿಲ್ಲಾಧಿಕಾರಿ

Manjula VN
ಹುಬ್ಬಳ್ಳಿ: ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿರುವ ಮೋಡ ಬಿತ್ತನೆ ಕಾರ್ಯ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಬೋಳನ್ ಅವರು ಗುರುವಾರ ಹೇಳಿದ್ದಾರೆ. 
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಪ್ರಭಾರಿ ಪ್ರಾದೇಶಿಕ ಆಯುಕ್ತೆ ಹಾಗೂ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆಗಾಗಿ ಬಂದಿರುವ ವಿಶೇಷ ವಿಮಾನಕ್ಕೆ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಆದರೆ, ಮೋಡ ಬಿತ್ತನೆಗೆ ಅನುಕೂಲಕರ ವಾತಾವರಣವಿಲ್ಲದ ಕಾರಣ ಗುರುವಾರ ಎಲ್ಲಿಯೂ ಮೋಡ ಬಿತ್ತನೆ ಮಾಡಲು ಸಾಧ್ಯವಾಗಲಿಲ್ಲ. 
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ವರ್ಷಧಾರೆ ಯೋಜನೆಯಡಿ ಈ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 2 ವಿಶೇಷ ವಿಮಾನಗಳು ಮೋಡ ಬಿತ್ತನೆ ಮಾಡಲಿವೆ. ಅದರಲ್ಲಿ ಒಂದು ದಕ್ಷಿಣ ಕರ್ನಾಟಕದಲ್ಲಿ, ಮತ್ತೊಂದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡಲಿವೆ. ಮುಂದಿನ 90 ದಿನಗಳ ಕಾಲ ಈ ವಿಶೇಷ ವಿಮಾನ ಹುಬ್ಬಳ್ಳಿ ನಿಲ್ದಾಣದಲ್ಲಿರಲಿದೆ ಎಂದು ವರದಿಗಳು ತಿಳಿಸಿವೆ. 
ಧಾರವಾಡ ಜಿಲ್ಲೆಯಲ್ಲಿ ಶೇ.20ರಷ್ಟು ಮಳೆ ಕೊರತೆಯಿದ್ದು, ಈ ಮೋಡ ಬಿತ್ತನೆಯಿಂದ ಮಳೆ ಕೊರತೆ ಸಮಸ್ಯೆ ಬಗೆಹರಿಯಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. 
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಜು.25 ರಿಂದಲೇ ಹುಬ್ಬಳ್ಳಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭಿಸಿದೆ. 
SCROLL FOR NEXT