ಪಿಎಂ ಕಿಸಾನ್ ಯೋಜನೆ: ತಿಂಗಳೊಳಗೆ ಹೆಚ್ಚುವರಿಯಾಗಿ ನೀಡುವ ಮೊದಲ ಕಂತು ಪಾವತಿಗೆ ಮುಖ್ಯಮಂತ್ರಿ ಸೂಚನೆ 
ರಾಜ್ಯ

ಪ್ರಧಾನಮಂತ್ರಿ ಕಿಸಾನ್ ಯೋಜನೆ: ಒಂದು ತಿಂಗಳಲ್ಲಿ ಮೊದಲ ಕಂತು ಪಾವತಿಗೆ ಕ್ರಮ- ಯಡಿಯೂರಪ್ಪ

ಕೇಂದ್ರ ಸರ್ಕಾರವು ರೈತರಿಗೆ ಪಿಎಂಕಿಸಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4000 ರೂಪಾಯಿ ನೆರವಿನ ಯೋಜನೆ

ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಪಿಎಂಕಿಸಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4000 ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು. ಮೊದಲ ಕಂತಿನ 2000 ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಎಂಕಿಸಾನ್ ಯೋಜನೆಯಿಂದ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತನಿಗೆ ಅಲ್ಪ ನೆರವಾದರೂ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬರ ಪರಿಸ್ಥಿತಿ:
ರಾಜ್ಯದಲ್ಲಿ ಈ ಬಾರಿಯೂ ಮಳೆಯ ತೀವ್ರ ಕೊರತೆ ಇದೆ. 2019ರ ಜನವರಿಯಿಂದ ಮೇ 31ರ ವರೆಗೆ ಪೂರ್ವ ಮುಂಗಾರು ಮಳೆಯಲ್ಲಿ ಸರಾಸರಿ ಶೇ. 42 ರಷ್ಟು ಕೊರತೆ ಇದೆ. ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ವಾರ ತಡವಾಗಿದ್ದಲ್ಲದೆ, ಈ ವರೆಗೆ ವಾಡಿಕೆ ಮಳೆಗಿಂತ ಶೇ. 18ರಷ್ಟು ಮಳೆ ಕೊರತೆ ಇದೆ. ಜುಲೈ ತಿಂಗಳಲ್ಲಿಯೂ 3067ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಟ್ಯಾಂಕರ್‍ಗಳ ಮೂಲಕ ಇಲ್ಲವೇ ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಕೆಯಾಗುತ್ತಿರುವುದು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ ಎಂದು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.
ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಮೇವು ಲಭ್ಯತೆ ಮತ್ತು ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವ ಮೂಲಕ ಜನ ವಲಸೆ ಹೋಗುವುದನ್ನು ತಡೆಗಟ್ಟಲು ಹಾಗೂ ಅಂತರ್ಜಲ ವೃದ್ಧಿ ಮತುತ ಜಲಸಂರಕ್ಷಣೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಈ ವರೆಗೆ 618.1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸುಮಾರು 422 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಬರ ಪರಿಹಾರ ಮತ್ತಿತರ ತುರ್ತು ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT