ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

10 ದಿನದೊಳಗೆ ರೈತರ ಖಾತೆಗೆ 2 ಸಾವಿರ ರೂ. ಜಮಾ: ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಎರಡು ಕಂತುಗಳಲ್ಲಿ 4 ಸಾವಿರ ರೂಪಾಯಿ ನೀಡಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನುಭವಿಯಾಗಿರುವ ರಾಜ್ಯದ 31. 72 ಲಕ್ಷ ರೈತರಿಗೆ ತಲಾ 2 ಸಾವಿರ ರೂಪಾಯಿಗಳನ್ನು 10 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ನಡೆದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಮುುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 43. 75 ಲಕ್ಷ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಲಾಗಿದೆ. ಈ ಪೈಕಿ ಅರ್ಹ 31.72 ಲಕ್ಷ ಫಲಾನುಭವಿ ರೈತರಿಗೆ  ಕೇಂದ್ರಸರ್ಕಾರದಿಂದ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ನೀಡುವುದರಿಂದ ರಾಜ್ಯದ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ಸಿಗಲಿದೆ ಎಂದು ಹೇಳಿದರು.
ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಾಗಿ 2 ಸಾವಿರ ರೂಪಾಯಿ ಹಣವನ್ನು 10 ದಿನಗಳ ಒಳಗಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಧನ ಬಿಡುಗಡೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳ ಪಿ. ಡಿ ಖಾತೆಯಿಂದಲೇ ಭರಿಸುವಂತೆ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಬದಲಿಗೆ 'ಸಮೋಸಾ'ಗಳ ಬಗ್ಗೆ ಮಾತನಾಡುತ್ತಿದ್ದ ರಾಘವ್ ಚಡ್ಡಾ: ಎಎಪಿ ಆರೋಪ

'ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ': ರಾಜ್ಯಸಭೆ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ಬಳಿಕ ರಾಘವ್ ಚಡ್ಡಾ ಪ್ರತಿಕ್ರಿಯೆ

West Asia Conflict: ಇರಾನ್-ಇಸ್ರೇಲ್ ಯುದ್ಧದ ನಡುವೆ ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್, ಸೀಮೆಎಣ್ಣೆ ಬೆಲೆ ಏರಿಕೆ!

ಇರಾನ್‌ ಯುದ್ಧದ ನಡುವೆ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಟ್ರಂಪ್ ಆಡಳಿತ!

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

SCROLL FOR NEXT