ಬೆಳಗಾವಿ ಪ್ರವಾಹ 
ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಪ್ರವಾಹ: 3000 ಹೆಕ್ಟೇರ್ ಬೆಳೆ ನಾಶ

ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದರು..,..

ಬೆಳಗಾವಿ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದರು.
ಶಾಲಾ-ಕಾಲೇಜುಗಳ ಕಟ್ಟಡಕ್ಕೆ ನೀರು ನುಗ್ಗಿರುವುದರಿಂದ ಜಿಲ್ಲಾಡಳಿತ ಮೂರು ದಿನಗಳ ಕಾಲ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿದೆ. ಹಲವೆಡೆ ರಸ್ತೆಗಳಿಗೂ ನೀರು ನುಗ್ಗಿರುವುದರಿಂದ ಸಂಚಾರ  ಅಸ್ತವ್ಯಸ್ತವಾಗಿದೆ ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.
ಪ್ರವಾಹ ಪೀಡಿತ ಬೆಳಗಾವಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ, ಸೇನೆಯ ಸಹಾಯವನ್ನು ಕೋರಲಾಗಿದೆ ಎಂದು ತಿಳಿಸಿದರು.
ಸೇನೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್ ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳೊಂದಿಗೆ ಬಳಸಿ ಪ್ರವಾಹಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲಾಗುವುದು ಎಂದರು.
ಪ್ರವಾಹದಿಂದ ರಕ್ಷಿಸಲ್ಪಟ್ಟ ಜನರಿಗೆನಿರಾಶ್ರಿತ ಕೇಂದ್ರಗಳಲ್ಲಿ ಹಾಗೂ ಜಾನುವಾರುಗಳಿಗೆ ಗೋ ಶಾಲೆಗಳಲ್ಲಿ ಆಶ್ರಯ ನೀಡಲಾಗಿದೆ. ಕೃಷ್ಣ ನದಿಯ ದಡದಲ್ಲಿ ಪ್ರವಾಹ ಪೀಡಿತ ಗ್ರಾಮಗಳಿಂದ ಇದುವರೆಗೆ ಸುಮಾರು 1000 ಜನರು ಮತ್ತು ಜಾನುವಾರುಗಳನ್ನು ರಕ್ಷಿಸಲಾಗಿದೆ. ಮಲಪ್ರಭಾ, ಘಟಪ್ರಭಾ ಜಲಾಶಯಗಳಿಗೆ ಭಾರೀ ಒಳಹರಿವು ಇದೆ.
ಬೆಳೆದು ನಿಂತಿದ್ದ ಸುಮಾರು 3000 ಹೆಕ್ಟೇರ್ ಬೆಳೆ ನಾಶವಾಗಿದ್ದು, ಸಂತ್ರಸ್ತ ಜನರಿಗಾಗಿ 8 ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದೆ. ಬೆಳಗಾವಿಯ ಮೂರು ತಾಲೂಕುಗಳಲ್ಲಿ 25 ಕ್ಕಿಂತಲೂ ಕಡಿಮೆ ತಗ್ಗು ಸೇತುವೆಗಳು ಜಲಾವೃತವಾಗಿವೆ.
ಅತಿವೃಷ್ಟಿಯನ್ನು ನಿಭಾಯಿಸಲು ಮತ್ತು ಪರಿಹಾರ ಕಾರ್ಯ ಕೈಗೊಳ್ಳಲು ಸರ್ಕಾರದ ಬಳಿ ಹಣದ ಕೊರತೆಯಿಲ್ಲ ಎಂದು ಹೇಳಿದ ಮುಖ್ಯಮಂತ್ರಿ, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ರಕ್ಷಿಸಿದವರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಮತ್ತು ರಕ್ಷಿಸಿದ ಪ್ರಾಣಿಗಳಿಗೆ ಸಾಕಷ್ಟು ಮೇವು ಮತ್ತು ನೀರನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT