ರಾಜ್ಯ

ಪ್ರಾಣಿ ಬಲಿ ನಿಷೇಧ ಕಾಯ್ದೆ ಜಾರಿಗೊಳಿಸಿ ಡಿಜಿಪಿಗೆ ಬಿಜೆಪಿ ನಾಯಕರ ಒತ್ತಾಯ

Nagaraja AB
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗೋ ಹತ್ಯೆ ಮತ್ತು ಅಕ್ರಮ ಸಾಗಣೆ, ಹತ್ಯೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.
ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದಿಂದ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಕುಮಾರ್ , ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. 1959ರಿಂದಲೇ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಹಿಂದೂಗಳಿಗೆ ಮಾತ್ರ ಅನ್ವಯಿಸುವಂತೆ ಜಾರಿ ಮಾಡಲಾಗಿತ್ತು. ಆದರೆ, 1975ರಲ್ಲಿ ವಿಧೇಯಕ ಎಲ್ಲಾ ಧರ್ಮ, ವರ್ಗದವರಿಗೆ ಅನ್ವಯಿಸುವಂತೆ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಕ್ರೀದ್ ಹಬ್ಬದ ವೇಳೆ ಕುರ್ಬಾನಿ ಹೆಸರಿನಲ್ಲಿ ನಡೆಯುವ ಪ್ರಾಣಿ ಬಲಿಯನ್ನು ತಡೆಯಲು ಕಾಯ್ದೆಯನ್ನು ಸಮರ್ಪಕವಾಗಿವಾಗಿ ಜಾರಿಗೊಳಿಸಬೇಕೆಂದು ಪೊಲೀಸ್ ಮಹಾನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಅಕ್ರಮವಾಗಿ ಗೋ, ಸಾಗಾಣಿಕೆ, ಕಳ್ಳತನ, ಹತ್ಯೆ ಮಾಡುವುದು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
SCROLL FOR NEXT