ರಾಜ್ಯ

ಪ್ರವಾಹಕ್ಕೆ ನಲುಗಿದ ಕರ್ನಾಟಕ: ಪ್ರವಾಹ ಪೀಡಿತ ಜಿಲ್ಲೆಗಳಿಗೆ ಬಿಜೆಪಿ ಸಮೀಕ್ಷಾ ತಂಡ ರಚನೆ

Vishwanath S
ಬೆಂಗಳೂರು: ರಾಜ್ಯದಲ್ಲಿ ಭೀಕರ ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಪ್ರವಾಸಕ್ಕೆ ಬಿಜೆಪಿ ಸಂಸದರು ಹಾಗೂ ಶಾಸಕರನ್ನೊಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿದೆ.
ಆ 8 ರಿಂದ 10 ರವರೆಗೆ ಈ ತಂಡಗಳು ಪ್ರವಾಹ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿವೆ. ಬೆಳಗಾವಿ, ಚಿಕ್ಕೋಡಿ ಹಾಗೂ ಬಾಗಲಕೋಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು, ಇದರಲ್ಲಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಗೋವಿಂದ ಕಾರಜೋಳ, ಮೇಲ್ಮನೆ ಸದಸ್ಯ ರವಿಕುಮಾರ್ ಇದ್ದಾರೆ.
ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದ ಎರಡನೇ ತಂಡ ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಬಸವರಾಜ ಬೊಮ್ಮಾಯಿ, ದಿನಕರಶೆಟ್ಟಿ ಅವರನ್ನೊಳಗೊಂಡಿದ್ದು, ಈ ತಂಡ ಧಾರವಾಡ, ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.
ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ನೇತೃತ್ವದ ತಂಡ  ಅಧ್ಯಯನ ನಡೆಸಲಿದೆ. ಶಾಸಕರಾದ ಸಿ.ಟಿ ರವಿ, ಸೋಮಣ್ಣ, ಕೆ.ಜಿ. ಬೋಪಯ್ಯ, ಪ್ರೀತಮ್ ಗೌಡ ಸಂಸದರಾದ ಪ್ರತಾಪ್ ಸಿಂಹ, ಬಿ.ವೈ ರಾಘವೇಂದ್ರ, ಒಳಗೊಂಡ ಮೂರನೇ ತಂಡ ಇದಾಗಿದೆ. 
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಟಂದೂರು, ಡಿ.ಎನ್.ಜೀವರಾಜ್ ಹಾಗೂ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಅವರನ್ನೊಳಗಂಡ ತಂಡಕ್ಕೆ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವ ವಹಿಸಿದ್ದಾರೆ. ಈ ತಂಡ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಶೀಲನೆ ನಡೆಸಲಿದೆ.
SCROLL FOR NEXT