ಬಿಎಸ್ ಯಡಿಯೂರಪ್ಪ 
ರಾಜ್ಯ

ದೆಹಲಿ ಪ್ರವಾಸ ಮೊಟಕು: ನಾಳೆ ದಕ್ಷಿಣ ಕನ್ನಡ, ನಾಡಿದ್ದು ಉಡುಪಿ ಜಿಲ್ಲೆಗೆ ಸಿಎಂ ಭೇಟಿ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಕ್ಷಿಣ ಕನ್ನಡ ಹಾಗೂ ನಾಡಿದ್ದು ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಕ್ಷಿಣ ಕನ್ನಡ ಹಾಗೂ ನಾಡಿದ್ದು ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರವಾಹ ಮತ್ತು ಭೂಕುಸಿತ ಸಂಭವಿಸಿರುವ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.

ಶನಿವಾರ ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ, ವೈಮಾನಿಕ ಸಮೀಕ್ಷೆ ನಡೆಸಲು ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕ ತೆರಳಬೇಕಾದ ಹಿನ್ನಲೆಯಲ್ಲಿ ಪ್ರವಾಸವನ್ನು ನಾಳೆಗೆ ಮುಂದೂಡಿದ್ದಾರೆ.

ಇಂದು ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಬಳಿಕ ಕೊಡಗು ಜಿಲ್ಲೆಗೆ ತೆರಳುವುದಾಗಿ ಪ್ರಕಟಿಸಿದ್ದರು. ಆದರೆ ಕಳೆದ ಮೂರು ದಿನಗಳಿಂದ ನಿರಂತರ ಪ್ರವಾಹ ಸಂತ್ರಸ್ಥರ ಭೇಟಿಯಿಂದ ಬಳಲಿರುವ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಳೆ ಬೆಳಗ್ಗೆ ಕರಾವಳಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Waqf Amendment Act: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂ ಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ, PIL ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ವೇಶ್ಯಾವಾಟಿಕೆಗೆ ತಳ್ಳಲು ಮಹಿಳೆಯರ ಅನೈತಿಕ ಸಾಗಣೆಯಲ್ಲಿ ಗಣನೀಯ ಏರಿಕೆ!

Financial relief: ಹಿಮಾಚಲ ಪ್ರದೇಶದ ನೆರೆಗೆ ರೂ.5 ಕೋಟಿ ನೆರವು: ಇದು ನ್ಯಾಯವೇ ಸಿದ್ದರಾಮಯ್ಯ? ಬಿಜೆಪಿ ಆಕ್ರೋಶ

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

SCROLL FOR NEXT