ರಾಜ್ಯ

ಕೊಯ್ನಾ ಜಲಾಶಯದ ನೀರಿನ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ಮಾತುಕತೆ- ಯಡಿಯೂರಪ್ಪ

Nagaraja AB
ಬೆಳಗಾವಿ: ಪ್ರವಾಹ ಪೀಡಿತ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಕ್ಷಣೆ ಹಾಗೂ ಪರಿಹಾರ  ಕಾರ್ಯಾಚರಣೆಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದರು.
ನೆರೆಯ ರಾಜ್ಯದ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹರಿಸದಂತೆ ತಡೆಯಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷ ಫಡ್ನವೀಸ್ ಪ್ರಸ್ತಾಪಿಸಿದ ನೀರು ಹಂಚಿಕೆ ಒಪ್ಪಂದ ಕುರಿತ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದ ಯಡಿಯೂರಪ್ಪ, ಜಲಾಶಯಗಳಿಂದ ಹೊರಬರುವ ನೀರಿನಿಂದ ಉಭಯ ರಾಜ್ಯಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಹಾರಾಷ್ಟ್ರದ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.
ಮಳೆ ಹೆಚ್ಚಾದ ಸಂದರ್ಭದಲ್ಲಿ ನೀರಿನ ಬಿಡುಗಡೆ ಬಗ್ಗೆ ಉಭಯ ರಾಜ್ಯಗಳ ನಡುವೆ ಸಹಕಾರ ಮೂಡಬೇಕಾಗಿದೆ. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ ಎಂಬುದು ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದರು.
SCROLL FOR NEXT