ರಾಜ್ಯ

ಅತಿವೃಷ್ಠಿ, ಪ್ರವಾಹದಿಂದ ಕೆಎಸ್ಆರ್‌ಟಿಸಿಗೆ 3.30 ಕೋಟಿ ರೂ. ನಷ್ಟ

ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 3.30 ಕೋಟಿ ರೂ ನಷ್ಟ ಸಂಭವಿಸಿದೆ. ಮೊದಲೇ ನಷ್ಟದಲ್ಲಿದ್ದ ಇಲಾಖೆಗೆ ಪ್ರಾಕೃತಿಕ ವಿಕೋಪವು ಮತ್ತಷ್ಟು ಆರ್ಥಿಕ ಸಂಕಷ್ಟ ತಂದೊಡ್ಡಿದೆ. 

ಬೆಂಗಳೂರು: ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 3.30 ಕೋಟಿ ರೂ ನಷ್ಟ ಸಂಭವಿಸಿದೆ. ಮೊದಲೇ ನಷ್ಟದಲ್ಲಿದ್ದ ಇಲಾಖೆಗೆ ಪ್ರಾಕೃತಿಕ ವಿಕೋಪವು ಮತ್ತಷ್ಟು ಆರ್ಥಿಕ ಸಂಕಷ್ಟ ತಂದೊಡ್ಡಿದೆ. 

ಆಗಸ್ಟ್ ಮೊದಲ ವಾರದಿಂದ ಆಗಸ್ಟ್ 10ರವರೆಗೆ ನಿಗಮದ ಬಸ್ಸುಗಳ 1545 ಅನುಸೂಚಿಗಳನ್ನು (ಷೆಡ್ಯುಲ್) ರದ್ದುಪಡಿಸಲಾಗಿದೆ.ಅಂದಾಜು 9,44,792 ಕಿ.ಮೀ ಸಂಚಾರವನ್ನು ಮಳೆ ಹಾಗೂ ಪ್ರವಾಹದಿಂದಾಗಿ ತಡೆಹಿಡಿಯಲಾಗಿದೆ. 16 ವಿಭಾಗಗಳಿಂದ ಒಟ್ಟು 4140 ಅನುಸೂಚಿಗಳನ್ನು ರದ್ದುಪಡಿಸಿದ್ದು, ಪೂರ್ಣ ಪ್ರಮಾಣದಲ್ಲಿ 1545 ಅನುಸೂಚಿಗಳು (ಷೆಡ್ಯುಲ್ಸ್) ಹಾಗೂ ಭಾಗಶಃ 2595 ಅನುಸೂಚಿಗಳನ್ನು ರದ್ದುಪಡಿಸಲಾಗಿದೆ. 

ನೆರೆ ಪ್ರಮಾಣ ಕಡಿಮೆಯಾಗಿ,ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಸಿಕ್ಕರೆ ತಕ್ಷಣದಿಂದಲೇ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನು ಓಡಿಸಲು ಇಲಾಖೆ ಸಿದ್ದವಾಗಿದೆ. ಅಲ್ಲದೆ ಈಗಾಗಲೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ನೆರೆ ಸಂತ್ರಸ್ಥರಿಗೆ ಪರಿಹಾರ ಸಾಮಗ್ರಿಗಳನ್ನು ಪೂರೈಸಲು ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ರವಾನೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!