ರಾಜ್ಯ

ಮನೆ ನಿರ್ಮಾಣಕ್ಕೆ 5 ಲಕ್ಷ, ದುರಸ್ತಿಗೆ 1 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ 

ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂಪಾಯಿ ಹಾಗೂ ಹಾನಿಗೀಡಾದವರಿಗೆ ದುರಸ್ತಿ ಕಾರ್ಯ ಕೈಗೊಳ್ಳಲು ಒಂದು ಲಕ್ಷ ರೂ ನೆರವು ನೀಡಲಾಗುವುದು....

ಮಂಗಳೂರು: ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂಪಾಯಿ ಹಾಗೂ ಹಾನಿಗೀಡಾದವರಿಗೆ ದುರಸ್ತಿ ಕಾರ್ಯ ಕೈಗೊಳ್ಳಲು ಒಂದು ಲಕ್ಷ ರೂ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಿಸಿದ್ದಾರೆ.
         
ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪರಿಹಾರ ಘೋಷಿಸಿದರು. 

ಪೂರ್ತಿ ಮನೆ ಕಳೆದು ಕೊಂಡವರಿಗೆ ಮನೆ ನಿರ್ಮಾಣ ಮಾಡಲು  5 ಲಕ್ಷ ರೂ  ಪರಿಹಾರ ಮಂಜೂರು ಮಾಡಲಾಗುವುದು ಹಾಗೂ ತಕ್ಷಣವೇ 10 ಸಾವಿರ ರೂ ನೀಡಲಾಗುವುದು. ಅಲ್ಲದೆ ಮನೆ ಕಳೆದುಕೊಂಡ ಕುಟುಂಬಕ್ಕೆ ತಕ್ಷಣ 10 ಸಾವಿರ ರೂ. ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್ ಶಶಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು.

ಒಂದು ವೇಳೆ ಸಂತ್ರಸ್ತರು ಬಾಡಿಗೆ ಮನೆಯಲ್ಲಿ ವಾಸಿಸುವುದಾದರೆ ಮಾಸಿಕ 5 ಸಾವಿರ ರೂ ಪರಿಹಾರ ಒದಗಿಸುವುದಾಗಿ ತಿಳಿಸಿದರು.

ಮನೆ ಮಠ ಇಲ್ಲದ ನಿರಾಶ್ರಿತರಿಗೆ ಸರ್ಕಾರದಿಂದ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸೂರಿಲ್ಲದವರಿಗೆ ಸೂರು ಕಲ್ಪಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು. 

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಗಸ್ಟ್ 16ರ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಅವರ ಜತೆ ಮಾತುಕತೆ ನಡೆಸುವುದಾಗಿಯೂ ಸ್ಪಷ್ಟಪಡಿಸಿದರು. 

ಪ್ರವಾಹ ನಿರ್ವಹಣೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 

ರಾಜ್ಯದ 86 ತಾಲ್ಲೂಕುಗಳ 2964 ಹಳ್ಳಿಗಳು ನೆರೆಯಿಂದ ಜಲಾವೃತಗೊಂಡಿದ್ದು, 81,887 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 1181 ಪರಿಹಾರ ಕೇಂದ್ರಗಳನ್ನು ತೆರೆದು 3,32,629 ಜನರಿಗೆ ಆಶ್ರಯ ನೀಡಲಾಗಿದೆ ಎಂದರು. 

ತಕ್ಷಣ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದು, ಕೇಂದ್ರದಿಂದ ಹೆಚ್ಚಿನ ನೆರವು ಬರುವ ನಿರೀಕ್ಷೆಯಿದೆ ಎಂದರು. 

ಮಂಗಳವಾರ ಶಿವಮೊಗ್ಗ ಮತ್ತು ಸಾಗರಕ್ಕೆ ತೆರಳುತ್ತಿದ್ದು, ಅಲ್ಲಿಯೂ ಸಹ ನೆರೆ ಪರಿಸ್ಥಿತಿ ಬಗ್ಗೆ ಅಧ್ಯಯನ ನಡೆಸುವುದಾಗಿ ಯಡಿಯೂರಪ್ಪ ಹೇಳಿದರು. 

ಬಳಿಕ ಯಡಿಯೂರಪ್ಪ, ಭಾರಿ ಮಳೆಗೆ ಕೊಚ್ಚಿ ಹೋದ  ಬೆಳ್ತಂಗಡಿ ತಾಲೂಕಿನ ಕುಕ್ಕಾವು ಸೇತುವೆಯನ್ನು ಪರಿಶೀಲಿಸಿ, ಮಾಹಿತಿ ಪಡೆದರು. ಮಿತ್ತಬಾಗಿಲಿನಲ್ಲಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದರು. ಸಂಸದ  ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್