ಬಿಎಸ್ ಯಡಿಯೂರಪ್ಪ 
ರಾಜ್ಯ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದ ಮತ್ತೊಂದು ದಾಖಲೆ! 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದಾಖಲೆಗಳ ಮೇಲೆ ದಾಖಲೆ ಸೃಷ್ಟಿಸುತ್ತಿದ್ದು, ನಾಲ್ಕು ಬಾರಿ ಸಿಎಂ ಆದ ದಾಖಲೆ ನಂತರ ಇದೀಗ ಮತ್ತೊಂದು ದಾಖಲೆಗೆ ಪಾತ್ರರಾಗುತ್ತಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದಾಖಲೆಗಳ ಮೇಲೆ ದಾಖಲೆ ಸೃಷ್ಟಿಸುತ್ತಿದ್ದು, ನಾಲ್ಕು ಬಾರಿ ಸಿಎಂ ಆದ ದಾಖಲೆ ನಂತರ ಇದೀಗ ಮತ್ತೊಂದು ದಾಖಲೆಗೆ ಪಾತ್ರರಾಗುತ್ತಿದ್ದಾರೆ.

ಈ ಹಿಂದೆ 2007ರಲ್ಲಿ 7 ದಿನ, 2018ರಲ್ಲಿ 3ದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಈಗ ಕ್ಯಾಬಿನೆಟ್ ಇಲ್ಲದೆ ಸ್ವಾತಂತ್ರೋತ್ಸವ ಆಚರಣೆ ಮಾಡುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.

ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ಯಾಬಿನೆಟ್ ಇಲ್ಲದೆ ಮುಖ್ಯಮಂತ್ರಿಗಳು ಸ್ವಾತಂತ್ರೋತ್ಸವ ಆಚರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದರೆ, 

ಅದೇ ರೀತಿ ಆಯಾ ಜಿಲ್ಲೆಗಳಲ್ಲಿ, ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.ರಾಷ್ಟ್ರಪತಿ ಅಳ್ವಿಕೆ ಇದ್ದಾಗ ಮಾತ್ರ ಜಿಲ್ಲಾಧಿಕಾರಿಗಳು ಧ್ವಜ ಹಾರಿಸಲು ಅನುಮತಿ ಇತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT