ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಳಪೆ ಔಷಧಿ ಖರೀದಿ ಆರೋಪ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕಳಪೆ ಔಷಧ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ‌ಕುಮಾರ್ ಹಾಗೂ ಮಾಜಿ ಸಚಿವ ಯು ಟಿ ಖಾದರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.

ರಮೇಶ್ ಕುಮಾರ್
Lingaraj Badiger
Updated On : 13 Aug 2019, 8:39 pm

ಬೆಂಗಳೂರು: ಕಳಪೆ ಔಷಧ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ‌ಕುಮಾರ್ ಹಾಗೂ ಮಾಜಿ ಸಚಿವ ಯು ಟಿ ಖಾದರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. 
 
ವಕೀಲ ಕೆ ವಿ ಶಿವಾರೆಡ್ಡಿ ಎಂಬುವವರು ಲೋಕಾಯುಕ್ತದಲ್ಲಿ ದೂರು  ದಾಖಲಿಸಿದ್ದು, ದೂರಿನಲ್ಲಿ ರಮೇಶ್ ಕುಮಾರ್ ಮತ್ತು ಯು.ಟಿ.ಖಾದರ್ ಆರೋಗ್ಯ ಸಚಿವರಾಗಿದ್ದ ಸಮಯದಲ್ಲಿ ಔಷಧ ಖರೀದಿಯಲ್ಲಿ 535 ಕೋಟಿ ರೂ. ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಪರೀಕ್ಷೆಗೆ ಒಳಪಡಿಸದ ಔಷಧಿಗಳನ್ನು ಖರೀದಿಸಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗಿದೆ. ಇದು ಮಹಾಲೇಖಪಾಲಕರ ವರದಿಯಲ್ಲೂ ಸಹ ಉಲ್ಲೇಖವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೆ 2018ರ ಜುಲೈ 6 ರಂದು ಸರ್ಕಾರಕ್ಕೆ ಸಿಎಜಿ ವರದಿ ಸಲ್ಲಿಸಿದೆ. ವರದಿ ಸಲ್ಲಿಕೆಯಾಗಿ 14 ತಿಂಗಳು‌ ಕಳೆದರೂ ಪ್ರಕರಣ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಶಿಫಾರಸ್ಸು ಮಾಡಿಲ್ಲ. ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿ ತಮ್ಮ ಅಧಿಕಾರ ಮತ್ತು ಪ್ರಭಾವ ಬಳಸಿ ಪ್ರಕರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. 
 
ಸುಮಾರು 100 ಕೋಟಿ ರೂ. ಮೌಲ್ಯದ ಕಳಪೆ ಔಷಧವನ್ನು ತಾವೇ ಮುಂದೆ ನಿಂತು ಸುಟ್ಟು  ಹಾಕಿಸಿರುವುದಾಗಿ ರಮೇಶ್​ ಕುಮಾರ್ ಸಚಿವರಾಗಿದ್ದ ವೇಳೆ ಹೇಳಿಕೆ ನೀಡಿದ್ದರು. ಅಷ್ಟೊಂದು ಪ್ರಮಾಣದ ಔಷಧ ಖರೀದಿಸಿದ್ದಾದರೂ ಏಕೆ? ಜನರಿಗೆ ಗುಣಮಟ್ಟದ ಔಷಧ ನೀಡಲಿಲ್ಲ ಏಕೆ? ಔಷಧಿಗಳನ್ನು ಸುಡಲು  ಅನುಮತಿ ನೀಡಿದ್ದು ಯಾಕೆ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಶಿವಾರೆಡ್ಡಿ ದೂರಿನಲ್ಲಿ ಕೋರಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments