ರಾಜ್ಯ

ಸಂಸ್ಕೃತ ವಿದ್ವಾನ್ ಡಾ. ಜನಾರ್ದನ ಹೆಗಡೆಗೆ ರಾಷ್ಟ್ರಪತಿ ಪುರಸ್ಕಾರ

Raghavendra Adiga

ಬೆಂಗಳೂರು: ಕೇಂದ್ರದ ಮಾನವ ಸಂಸಾದನ ಮಂತ್ರಾಲಯವು ಪ್ರತಿವರ್ಷ ಭಾರತೀಯ ಭಾಷೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಷ್ಟ್ರಪತಿ ಪುರಸ್ಕಾರ ನೀಡುತ್ತಿದ್ದು, 2019ನೇ ಸಾಲಿನ ಪುರಸ್ಕಾರಕ್ಕೆ ಸಂಸ್ಕೃತ ವಿದ್ವಾಂಸ ಡಾ. ಜನಾರ್ದನ ಹೆಗಡೆ ಭಾಜನರಾಗಿದ್ದಾರೆ.

ಸಂಸ್ಕೃತ ಭಾಷೆಗಾಗಿ ಅವರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆಯನ್ನು ಗಮನಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ರಾಷ್ಟ್ರಪತಿ ಪ್ರಮಾಣ ಪತ್ರ ಮತ್ತು 5 ಲಕ್ಷ ರೂ ನಗದು ಪುರಸ್ಕಾರ ಒಳಗೊಂಡಿದೆ. ಸಂಸ್ಕೃತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಸಂಸ್ಕೃತ ವಿದ್ವಾಂಸರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಂಸ್ಕೃತ ಜಗತ್ತಿನ ಅನೇಕ ಗಣ್ಯರು ಡಾ. ಜನಾರ್ದನ ಹೆಗಡೆ ಅವರಿಗೆ ಈ ಪ್ರಶಸ್ತಿ ಲಭಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಜನಾರ್ದನ ಹೆಗಡೆ ಅವರು “ಸಂಭಾಷಣ ಸಂದೇಶಃ” ಎಂಬ ಸಂಸ್ಕೃತ ಮಾಸಪತ್ರಿಕೆಯ ಸಂಸ್ಥಾಪಕ ಸಂಪಾದಕರು.

SCROLL FOR NEXT