ರಾಜ್ಯ

ಸಚಿವ ಸಂಪುಟ ರಚನೆಗೆ ಅಮಿತ್ ಷಾ ಒಪ್ಪಿಗೆ : ಮಂಗಳವಾರ ಮುಹೂರ್ತ ಫಿಕ್ಸ್

ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಒಪ್ಪಿಗೆ ಸೂಚಿಸಿದ್ದು, ಮಂಗಳವಾರ ಮೊದಲ; ಹಂತದ ಸಂಪುಟ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. 

ಬೆಂಗಳೂರು: ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಒಪ್ಪಿಗೆ ಸೂಚಿಸಿದ್ದು, ಮಂಗಳವಾರ ಮೊದಲ; ಹಂತದ ಸಂಪುಟ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. 

ನವದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ರಚನೆಗೆ ಅಮಿತ್ ಷಾ ಅನುಮತಿ ನೀಡಿದ್ದಾರೆ. ಪಕ್ಷಾಧ್ಯಕ್ಷರಿಗೆ ಯಡಿಯೂರಪ್ಪ ಸಂಭಾವ್ಯ ಸಚಿವರ ಪಟ್ಟಿಯನ್ನು ಸಲ್ಲಿಸಿದ್ದು, ಸಂಪುಟ ಸೇರುವವರು ಯಾರು ಎನ್ನುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಇದೀಗ ಸಚಿವಾಕಾಂಕ್ಷಿಗಳ ಪಟ್ಟಿಗೆ ಅನುಮೋದನೆ ದೊರೆಯುವುದು ಮಾತ್ರ ಬಾಕಿ ಇದೆ. 

ಸಂಪುಟ ರಚನೆಗೆ ಅನುಮತಿ ದೊರೆಯುತ್ತಿದ್ದಂತೆ ಗೃಹ ಇಲಾಖೆಯ ಕಚೇರಿಯಿಂದ ನೇರವಾಗಿ ಯಡಿಯೂರಪ್ಪ ವಿಮಾನ ನಿಲ್ದಾಣದ ಕಡೆ ಪ್ರಯಾಣ ಬೆಳೆಸಿದರು. ಯಡಿಯೂರಪ್ಪ ಮುಖ್ಯಮಂತ್ರಿಯಾದ 22 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಪಕ್ಷದ ರಾಷ್ಟ್ರೀಯ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಭಾನುವಾರ ಅಥವಾ ಸೋಮವಾರ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಅಮಿತ್ ಕಚೇರಿಯಿಂದ ಮುಖ್ಯಮಂತ್ರಿ ಅವರಿಗೆ ರವಾನೆ ಮಾಡಲಿದ್ದು, ಅದಕ್ಕಾಗಿ ತಯಾರಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದ್ದು, ಸಭೆಯ ಬಳಿಕ ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಲಿದ್ದಾರೆ. ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಕನಿಷ್ಟ 15 ಜನ ಶಾಸಕರು ಸಚಿವರಾಗಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!