ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರ ಬಂಧನ, 1.97 ಲಕ್ಷ ನಗದು ವಶ

ಕರ್ನಾಟಕ ಪ್ರಿಮೀಯರ್ ಲೀಗ್-2019 ಕ್ರಿಕೆಟ್ ಪಂದ್ಯಾವಳಿಯ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 1.97 ಲಕ್ಷ ರೂ ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಸಂಗ್ರಹ ಚಿತ್ರ
Raghavendra Adiga
Updated On : 18 Aug 2019, 1:48 pm

ಬೆಂಗಳೂರು: ಕರ್ನಾಟಕ ಪ್ರಿಮೀಯರ್ ಲೀಗ್-2019 ಕ್ರಿಕೆಟ್ ಪಂದ್ಯಾವಳಿಯ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 1.97 ಲಕ್ಷ ರೂ ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಬನಶಂಕರಿಯ ಮಹೇಶ್ (46) ಮತ್ತು ದಾಸರಹಳ್ಳಿಯ ಹರೀಶ್ (39) ಬಂಧಿತರು. ಶನಿವಾರ ರೇಸ್ ಕೋರ್ಸ್ ರಸ್ತೆಯ ಸ್ವಿಸ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಹುಬ್ಬಳ್ಳಿ ಟೈಗರ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳ ಫಲಿತಾಂಶದ ಬಗ್ಗೆ ಸಾರ್ವಜನಿಕರಿಂದ ಫೋನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರಕಿತ್ತು.

ಈ ಮಾಹಿತಿ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡುಆರೋಪಿಗಳನ್ನು ಬಂಧಿಸಿದ್ದಾರೆ.

Advertisement

Advertisement

Related Article

ದೂರವಾಣಿ ಕದ್ದಾಲಿಕೆ ಪ್ರಕರಣ: ಸಿದ್ದು ಸ್ವಾಗತ, ಕೆಪಿಸಿಸಿ ಟ್ವೀಟ್ ಡಿಲೀಟ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments