ಸಾಂದರ್ಭಿಕ ಚಿತ್ರ 
ರಾಜ್ಯ

ಚಲನಚಿತ್ರಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸುತ್ತಿದ್ದ ವಂಚಕನ ಬಂಧನ

ಚಲನಚಿತ್ರ ನಟನೋರ್ವನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಯುವತಿಯರಿಗೆ ಚಿತ್ರಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಚಲನಚಿತ್ರ ನಟನೋರ್ವನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಯುವತಿಯರಿಗೆ ಚಿತ್ರಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುಂಕದ ಕಟ್ಟೆಯ 22 ವರ್ಷದ ವೆಂಕಟೇಶ್ ಬಾವಸಾರ್ ಬಂಧಿತ ಆರೋಪಿ. ಈತ ಚಲನಚಿತ್ರ ನಟನೋರ್ವನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಸುಂದರ ಯುವತಿಯರನ್ನು ಪರಿಚಯ ಮಾಡಿಕೊಂಡು ನಂತರ ಸಲುಗೆಯಿಂದ ಚಾಟಿಂಗ್ ಮಾಡುತ್ತಿದ್ದ. ಯುವತಿಯರು ದೂರವಾಣಿ ಕರೆ ಮಾಡಿ ಮಾತನಾಡುವಂತೆ ಒತ್ತಾಯಿಸಿದಾಗ, ತನಗೆ ಡಿಸೆಂಬರ್ ವರೆಗೂ ಸಮಯವಿಲ್ಲ. ತನ್ನ ಅಸಿಸ್ಟೆಂಟ್ ವೆಂಕಿರಾವ್ ಅವರನ್ನು ಸಂಪರ್ಕಿಸಿ ಎಂದು ವಾಟ್ಸಾಪ್ ಸಂಖ್ಯೆ ನೀಡಿ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ.

ಒಮ್ಮೆ ಪರಿಚಯವಾಗಿದ್ದ ಮಹಿಳೆಯೊಬ್ಬರ ಮಗಳಿಗೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ 25 ಸಾವಿರ ರೂ. ಪಡೆದು ವಂಚಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ನಟರೊಬ್ಬರು ತಮ್ಮ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯುವತಿಯರನ್ನು ವಂಚಿಸಲಾಗುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಅದರನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT