ರಾಜ್ಯ

ನೆರೆ ಪ್ರವಾಹ ಸಂತ್ರಸ್ತ ನಿಧಿಗೆ ಧರ್ಮಸ್ಥಳ ಕ್ಷೇತ್ರದಿಂದ 25 ಕೋಟಿ ರೂ ನೆರವು 

Sumana Upadhyaya

ಧರ್ಮಸ್ಥಳ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಜನರ ಸಂಕಷ್ಟಕ್ಕೆ ನೆರವಾಗಲು ಶ್ರೀ ಕ್ಷೇತ್ರ ಧರ್ಮಸ್ಥಳ 25 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳ ಪ್ರವಾಹ ಪರಿಹಾರ ನಿಧಿಗೆ ನೀಡಿದೆ.


ಪರಿಹಾರ ಮೊತ್ತದ ಚೆಕ್ ನ್ನು ನಿನ್ನೆ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಿಗೆ ಹಸ್ತಾಂತರಿಸಿದರು.


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖಾಂತರ ಈ ಮೊತ್ತವನ್ನು ಧರ್ಮಾಧಿಕಾರಿಗಳು ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಿದರು. ಇದೇ ಸಂದರ್ಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕಾಳಜಿ ಬೆಳ್ತಂಗಡಿ ಪ್ರವಾಹ ಪರಿಹಾರ ನಿಧಿಗೆ ಸಹ ಕ್ಷೇತ್ರದ ವತಿಯಿಂದ 50 ಲಕ್ಷ ರೂಪಾಯಿಗಳನ್ನು ನೀಡಲಾಯಿತು. 


ಈ ಕುರಿತು ಧರ್ಮಸ್ಥಳದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, "ಪಶ್ಚಿಮಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ 2 ಕೋಟಿ ರೂಪಾಯಿ ಮೀಸಲಾಗಿರಿಸಿದ್ದು, ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ ಮಾಡಿ 2 ಲಕ್ಷ ಸದಸ್ಯರಿಗೆ ತರಬೇತಿ ನೀಡಲಾಗುವುದು" ಎಂದು ಹೇಳಿದರು. 

ಬೆಳ್ತಂಗಡಿ ತಾಲೂಕಿನಲ್ಲಿ ನೆರೆಯಿಂದಾಗಿ 174 ಮನೆಗಳು ಹಾನಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಅಕ್ಷರಸ್ಥರ ನೆರವಿಗಾಗಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಕ್ಕೆ 50 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಹ ಹೆಗ್ಗಡೆಯವರು ತಿಳಿಸಿದ್ದಾರೆ.

SCROLL FOR NEXT