ಸಂಗ್ರಹ ಚಿತ್ರ 
ರಾಜ್ಯ

ಹಾಸನ: ಚಾಕುವಿನಿಂದ ತಿವಿದು ರೌಡಿಶೀಟರ್ ಬರ್ಬರ ಹತ್ಯೆ!

ರೌಡಿಶೀಟರ್ ಒಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಹಾಸನ: ರೌಡಿಶೀಟರ್ ಒಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಹಡೆನಹಳ್ಳಿ ಹರೀಶ ಕೊಲೆಯಾದ ರೌಡಿಶೀಟರ್. ಧನಲಕ್ಷ್ಮಿ ಥಿಯೇಟರ್ ಹತ್ತಿರದ ಬಾರ್ ನಲ್ಲಿ ಕುಡಿದು ಹೊರ ಬಂದಾಗ ಈತನನ್ನು ದುಷ್ಕರ್ಮಿಗಳು ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದಾರೆ.

ಕಳೆದ 2 ವರ್ಷಗಳ ಹಿಂದೆ ಶಿವ ಎಂಬುವನನ್ನು ಕೊಲೆ ಮಾಡಿದ್ದ ಆರೋಪಿ ಹರೀಶ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಡಾ. ಎ.ಎನ್.ಪ್ರಕಾಶ ಗೌಡ ತಿಳಿಸಿದ್ದಾರೆ.

ಸುದ್ದಿ ತಿಳಿದ ಚನ್ನರಾಯಪಟ್ಟಣ ನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದು ಮೃತದೇಹವನ್ನು ಶವ ಪರೀಕ್ಷೆಗೆ ಸಕಾ೯ರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!