ರಾಜ್ಯ

ರೋಷನ್ ಬೇಗ್ ಕುಟುಂಬದ ವಿರುದ್ಧ ಪೋಸ್ಟ್: 10 ಮಂದಿಗೆ ಸಮನ್ಸ್

Srinivasamurthy VN

ಬೆಂಗಳೂರು: ಐಎಂಎ ಹಗರಣಕ್ಕೆ ಸಂಬಂಧಿಸಿ ಶಿವಾಜಿನಗರ ಕ್ಷೇತ್ರದ ಅನರ್ಹ ಶಾಸಕ ರೋಷನ್ ಬೇಗ್ ಕುಟುಂಬದವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ 10 ಮಂದಿ ಪ್ರತಿವಾದಿಗಳಿಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಇಂದು ಸಮನ್ಸ್ ಜಾರಿ ಮಾಡಿದೆ.

ಆಧಾರ ರಹಿತ ಪೋಸ್ಟ್ ಮಾಡಿರುವುದನ್ನು ಪ್ರಶ್ನಿಸಿ ಬೇಗ್ ಅವರ ಪುತ್ರ ರುಮಾನ್ ಬೇಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಗರ ಸಿಟಿ ಸಿವಿಲ್ ಕೋರ್ಟ್ ನಲ್ಲಿಂದು ನಡೆಯಿತು.

ಪೋಸ್ಟ್ ಮಾಡಿರುವ ನಫೀಸಾ ಖಾನ್ ಸೇರಿ 10 ಮಂದಿ ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಮಾತ್ರವಲ್ಲ ತಕ್ಷಣ ಪೋಸ್ಟ್ ಗಳನ್ನು ಅಳಿಸುವಂತೆಯೂ ಸೂಚಿಸಿದ್ದಾರೆ.

ಇನ್ನು ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರದ ಶಾಸಕ ರೋಷನ್ ಬೇಗ್ ಅವರೂ ಕೂಡ ಆರೋಪಿ ಸ್ಥಾನದಲ್ಲಿದ್ದಾರೆ. ಅಲ್ಲದೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಕೂಡ ಈ ಹಿಂದೆ ರೋಷನ್ ಬೇಗ್ ಅವರಿಗೆ 400 ಕೋಟಿ ರೂ ನೀಡಿದ್ದೆ ಎಂದು ಹೇಳಿಕೆ ನೀಡಿದ್ದ. ಹೀಗಾಗಿ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹಸ್ತಕ್ಷೇಪದ ಕುರಿತು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಸುದ್ದಿ ಹರಿದಾಡಿತ್ತು.

SCROLL FOR NEXT