ಎಸ್.ಸುರೇಶ್ ಕುಮಾರ್ 
ರಾಜ್ಯ

ಕೊಡಗು ಜಿಲ್ಲೆಯ ಭೂಕುಸಿತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ

ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.  

ಮಡಿಕೇರಿ: ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಕುಶಾಲನಗರ, ನೆಲ್ಯಹುದಿಕೇರಿ ಬಳಿಯ ಕುಂಬಾರಗುಂಡಿ, ಸಿದ್ದಾಪುರ ಬಳಿಯ ಕರಡಿಗೋಡು ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳು, ತೋರ ಭೂ ಕುಸಿತ ಪ್ರದೇಶ, ಮಾಕುಟ್ಟ ರಸ್ತೆ ವೀಕ್ಷಣೆ ಹಾಗೂ ವಿರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಭೂಮಿ ಬಿರುಕು ಬಿಟ್ಟಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.  

ಈ ಸಂದರ್ಭದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಜೊತೆ ಮಾತನಾಡಿದ ಸಚಿವರು, ಪ್ರವಾಹದಿಂದ ತುಂಬಾ ತೊಂದರೆಗೆ ಒಳಗಾಗಿದ್ದು, ಸ್ಥಳಾಂತರವಾಗಲು ಮನಸ್ಸು ಮಾಡಬೇಕು. ಸರ್ಕಾರದಿಂದ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ಜನರಿಗೆ ತಿಳಿಸಿದರು. ಅದಕ್ಕೆ ಸಂತ್ರಸ್ತರು ಕೂಲಿ ಮಾಡಿ ಬದುಕುತ್ತಿದ್ದೆವು, ಪ್ರವಾಹದಿಂದಾಗಿ ಮನೆ ಕಳೆದುಕೊಂಡಿದ್ದು, ದಿಕ್ಕು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡರು. 

ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು. ಕುಂಬಾರಗುಂಡಿ ಮತ್ತು ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಈ ಸಂಬಂಧ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲಾಗುವುದು ಎಂದರು. 

ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಪ್ರವಾಹದಿಂದ ಸಾಕಷ್ಟು ಮನೆಗಳಿವೆ ಹಾನಿಯಾಗಿವೆ. ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಪುನರ್ವಸತಿ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ, ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಸುಮಾರು 190 ಕ್ಕೂ ಹೆಚ್ಚು ಮನೆಗಳು ಹಾನಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಕುಟುಂಬಗಳನ್ನು ಸ್ಥಳಾಂತರಿಸಿ ಮನೆ ನಿರ್ಮಿಸಿಕೊಡಬೇಕಿದೆ ಎಂದರು. ಈಗಾಗಲೇ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ 10 ಸಾವಿರ ರೂ ಪರಿಹಾರ ನೀಡಲಾಗಿದೆ. ಕೇಂದ್ರದ ಗೃಹ ಸಚಿವರು ಮತ್ತು ಹಣಕಾಸು ಸಚಿವರು ರಾಜ್ಯ ಪ್ರವಾಸ ಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು.  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಸಚಿವರಿಗೆ ಸಾಥ್ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!