ಬಸ್ ಅಪಘಾತ 
ರಾಜ್ಯ

ಬಸ್‌ ಗೆ ಲಾರಿ ಡಿಕ್ಕಿ: ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ಇಬ್ಬರ ಸಾವು, 10 ಮಂದಿಗೆ ಗಾಯ

ಮದುವೆ  ಸಮಾರಂಭ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮದುವೆ ದಿಬ್ಬಣದ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಮೈಸೂರು: ಮದುವೆ  ಸಮಾರಂಭ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮದುವೆ ದಿಬ್ಬಣದ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಮೈಸೂರು  ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಗರ್ಗೆಶ್ವರಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ  ಮದುವೆ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿ.  ನರಸೀಪುರ ಪಟ್ಟಣದ ಚಿಕ್ಕಮ್ಮ ತಾಯಿ ಛತ್ರದಲ್ಲಿ ಮದುವೆ ಮುಗಿಸಿ ಬಸ್‌ನಲ್ಲಿ ನರಸೀಪುರದ  ಚೋರನಹಳ್ಳಿಗೆ ವಾಪಾಸ್ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಟಿ. ನರಸೀಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ