ವಿ. ಸೋಮಣ್ಣ 
ರಾಜ್ಯ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ. ಸೋಮಣ್ಣ, ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ್ ನೇಮಕ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ವಿ ಸೋಮಣ್ಣ, ಮಾನ್ಯ ಸಚಿವರು, ಕರ್ನಾಟಕ ಸರ್ಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಡ ಹಬ್ಬ ದಸರಾ ಸಮೀಪಿಸುತ್ತಿದ್ದು, ದಸರಾ ಸಿದ್ಧತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ  ತುರ್ತು ಅಗತ್ಯ ಇರುವುದರಿಂದ ರಾಜ್ಯ ಸರ್ಕಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾತ್ರವೇ ನೇಮಕ ಮಾಡಿದೆ ಎನ್ನಲಾಗಿದೆ.

ಇದಕ್ಕು ಮುನ್ನ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೆ ಶಂಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಿತೇಶ್ ಪಾಟೀಲ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.

ದಸರೆ ಉದ್ಘಾಟನೆಗೆ ಕೇವಲ 35 ದಿನಗಳು ಬಾಕಿ ಇದ್ದು, ಹಲವಾರು ಕಾಮಗಾರಿಗಳು ನಡೆಯಬೇಕಿದೆ. ಟೆಂಡರ್ ಕರೆಯಬೇಕಿದೆ, ಉಪ ಸಮಿತಿ ರಚಿಸಿ ಸಭೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಇಂದು ನೂತನ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ