ರಾಜ್ಯ

ರೈತರ ಮೇಲಿನ ಪ್ರಕರಣ ವಾಪಸ್ ಗೆ ರಾಜ್ಯ ಸರ್ಕಾರದ ಭರವಸೆ

Raghavendra Adiga

ಬೆಂಗಳೂರು: ರೈತರ  ಹೋರಾಟದ ವೇಳೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು,ಇಂದು ಸಂಜೆಯೊಳಗೆ ಕೇಸ್ ಗಳನ್ನ ವಾಪಾಸ್ ಪಡೆಯುವುದಾಗಿ ಮುಖ್ಯವಾಗಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ರೈತ ಮುಖಂಡರಿಗೆ ಭರವಸೆ ನೀಡಿದ್ದಾರೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ರೈತ ಮುಖಂಡರು ರೈತರ ಮೇಲಿನ ಕೇಸ್ ಗಳನ್ನು ವಾಪಸ್ಸು ಪಡೆಯುವಂತೆ ಮನವಿ ಮಾಡಿದರು. ಮುಖಂಡರ ‌ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲು ‌ನಿರ್ಧರಿಸಿದ್ದು, ಕೇಸ್ ವಾಪಸ್ಸು ಪಡೆಯುವ ಕುರಿತು ಅಗತ್ಯ ಕ್ರಮಕ್ಕೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಷ್ಟು ಪ್ರಕರಣ ದಾಖಲಾಗಿವೆ ಎನ್ನುವ ಮಾಹಿತಿ ನೀಡುವಂತೆ ಗೃಹ ಇಲಾಖೆ ಹಾಗು ಒಳಾಡಳಿತ ಇಲಾಖೆಯ ಅಭಿಯೋಜನೆ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಇಂದು ಸಂಜೆಯೊಳಗೆ ಎಲ್ಲಾ ಪ್ರಕರಣ ವಾಪಾಸ್ ಪಡೆಯುತ್ತೇವೆ ಎಂದು ಭರವಸೆ ನೀಡಿದರು

ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ರೈತ ಮುಖಂಡ‌ ಕುರುಬೂರು ಶಾಂತ್ ಕುಮಾರ್ ,ರೈತರ ಮೇಲಿನ ಪ್ರಕರಣಗಳನ್ನು ವಾಪಸ್ಸು ಪಡೆಯುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ ಅವರು ಪ್ರಕರಣಗಳನ್ನು ವಾಪಸ್ಸು ಪಡೆಯುವುದಾಗಿ ಭರವಸೆ ಕೊಟ್ಟಿದ್ದಾರೆ, ಅಲ್ಲದೆ ಯಾವ ಯಾವ ಹೋರಾಟದಲ್ಲಿ ಎಷ್ಟೆಷ್ಟು ಪ್ರಕರಣ ದಾಖಲಾಗಿದೆ,ಈ ಸಂಬಂಧಿತ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿ ಸಚಿವ ಸಂಪುಟಕ್ಕೆ ಟಿಪ್ಪಣಿ ರವಾನಿಸುವಂತೆಯೂ ಅವರು  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
 

SCROLL FOR NEXT