ರಾಜ್ಯ

ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ: ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದ ಅನರ್ಹ ಶಾಸಕರ ಆಸೆಗೆ ತಣ್ಣೀರು!

Shilpa D

ನವದೆಹಲಿ: ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತುರ್ತು ವಿಚಾರಣೆಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದೆ.

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನಿರಾಕರಿಸುವುದೆಂದು ಗೊತ್ತಿದ್ದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಪರ ವಕೀಲ ರೋಹ್ಟಗಿ ಅರ್ಜಿ ಮೆನ್ಷನ್ ಗೆ ಮುಂದಾಗಿರಲಿಲ್ಲ, ಸುಪ್ರೀಂಕೋರ್ಟ್ ಈ ನಿರ್ಧಾರದಿಂದ ಅನರ್ಹ ಶಾಸಕರಿಗೆ ತೀವ್ರ ಹಿನ್ನಡೆಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ  ಸಂಪುಟ ಸೇರಲುಪ ತುದಿಗಾಲಲ್ಲಿ ನಿಂತಿದ್ದ ಜೆಡಿಎಸ್ ಕಾಂಗ್ರೆಸ್ ಅನರ್ಹ ಶಾಸಕರ ಆಸೆಗೆ ಸುಪ್ರೀಂಕೋರ್ಟ್ ತಣ್ಣೀರೆರಚಿದೆ.

ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರು ಸಲ್ಲಿಸಿದ್ದ ರಾಜೀನಾಮೆಯನ್ನು ಅಂದು ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಿದ್ದರು. ಅಲ್ಲದೇ ಅದರಲ್ಲಿ 13 ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಇದೀಗ ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಬಂಡಾಯ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

SCROLL FOR NEXT