ಸಂಗ್ರಹ ಚಿತ್ರ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಅಟ್ಟಹಾಸ, ನಡುರಾತ್ರಿಯಲ್ಲಿ ಭೀಕರ ಡಬಲ್ ಮರ್ಡರ್!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಭಾನುವಾರ ರಾತ್ರಿ ನಗರದ ಜೆಪಿ ನಗರ ಪುಟ್ಟೇನಹಳ್ಳಿಯಲ್ಲಿ ಇಬ್ಬರು ರೌಡಿಗಳನ್ನು ಅಟ್ಟಾಡಿಸಿ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಸೇರಿದಂತೆ ನಗರದ ಜನರು ಬೆಚ್ಚಿ ಬೀಳುವಂತಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಭಾನುವಾರ ರಾತ್ರಿ ನಗರದ ಜೆಪಿ ನಗರ ಪುಟ್ಟೇನಹಳ್ಳಿಯಲ್ಲಿ ಇಬ್ಬರು ರೌಡಿಗಳನ್ನು ಅಟ್ಟಾಡಿಸಿ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಸೇರಿದಂತೆ ನಗರದ ಜನರು ಬೆಚ್ಚಿ ಬೀಳುವಂತಾಗಿದೆ.

ರೌಡಿ ಶೀಟರ್ ತಮ್ಮ ಮಂಜ ಮತ್ತು ನವೀನ್ ಅವರುಗಳನ್ನು ಜೆಪಿ ನಗರದ 24 ನೇ ಮುಖ್ಯ ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಪುಟ್ಟೇನಹಳ್ಳಿ ಜಂಕ್ಷನ್ 24ನೇ ಕ್ರಾಸ್ ನಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂ ಬಳಿ ನವೀನ್ ಕುಮಾರ್ ಕೊಲೆಯಾದರೆ ಪುಟ್ಟೇನಹಳ್ಳಿ ಜಂಕ್ಷನ್ ಸಮೀಪದ ನಂದನಿ ಹೋಟೆಲ್ ಬಳಿ ತಮ್ಮ ಮಂಜ ಹತ್ಯೆಯಾಗಿದ್ದಾನೆ.

ಎರಡೂ ರೌಡಿಗಳನ್ನು ಕೊಂದದ್ದು ಒಂದೇ ಹಂತಕ ತಂಡ ಎನ್ನಲಾಗಿದ್ದು ಇದರಲ್ಲಿ ನವೀನ್ ರಿಯಲ್ ಎಸ್ಟೇಟ್ ಬೊಲ್ಡರ್ ಒಬ್ಬರ ಮಗನಾದರೆ ತಮ್ಮ ಮಂಜ ರೌಡಿ ಶೀಟರ್ ಆಗಿದ್ದನು.

ಭಾನುವಾರ ರಾತ್ರಿ ನವೀನ್ ಮಂಜನ ಜತೆ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಏಳರಿಂದ ಹತ್ತು ಜನರಿದ್ದ ಗುಂಪು ಸ್ಯಾಂಟ್ರೊ ಸ್ಪೋರ್ಟ್ಸ್ ಕಾರಲ್ಲಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು  ಕಾರಿನಲ್ಲೇ ಟ್ಟಾಡಿಸಿಕೊಂಡು ಹಿಗ್ಗಾಮುಗ್ಗಾ ಹೊಡೆಯಲಾಗಿದೆ. ಈ ಹೊಡೆದಾಟದಲ್ಲಿ ಬೀದಿದೀಪದ ಕಂಬವೊಂದು ಮುರಿದು ಬಿದ್ದಿದೆ. ಬಳಿಕ ಮನಬಂದಂತೆ ಲಾಂಗು, ಮಚ್ಚುಗಳಿಂದ ಕೊಚ್ಚಿ ಇಬ್ಬರನ್ನೂ ಹತ್ಯೆ ಮಾಡಲಾಗಿದೆ.

ತಮ್ಮ ಮಂಜನ ವಿರುದ್ಧ  ತಲಘಟ್ಟಪುರ ಮತ್ತು ಕುಮಾರಸ್ವಾಮಿ ಲೇಔಟ್ ಠಾಣೆಗಳಲ್ಲಿ ರೌಡಿ ಶೀಟ್ ಇದೆ. ಅಲ್ಲದೆ ಈತ ಟ್ಯಾಬ್ಲೆಟ್ ರಘು ಎಂಬ ರೌಡಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದ್ದು ಇದೇ ದ್ವೇಷದಿಂದ ಮಂಜನ ಹತ್ಯೆಯು ನಡೆದಿದೆ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಮಾಹಿತಿ ಪಡೆದ ಪೋಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಮಾಡುವಾಗ ಆಕ್ಸಿಡೆಂಟ್ ಆದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಕಾರು ವೀರಭಧ್ರಸ್ವಾಮಿ ಎಂಬವರ ಹೆಸರಿನಲ್ಲಿದೆ. ಘಟನೆ ನಡೆದ ಜಾಗದಲ್ಲಿ ಒಂದು ಪೀಠೋಪಕರಣ ಮಳಿಗೆ ಇದ್ದು, ಸಿಸಿ ಕ್ಯಾಮೆರಾ ಇದೆ. ಆದರೆ .ಅದು ಕಳೆದ ಕೆಲ ದಿನಗಳಿಂದ ಕೆಲಸ ಮಾಡುತ್ತಿಲ್ಲ ಎನ್ನಲಾಗಿದೆ. ಘಟನೆ ಕುರಿತು ಜೆಪಿ ನಗರ, ಪುಟ್ಟೇನಹಳ್ಳಿ ಠಾಣೆಗಳಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT