ರಾಜ್ಯ

ಬಿಬಿಎಂಪಿ ನೂತನ ಆಯುಕ್ತರಾಗಿ ಅನಿಲ್ ಕುಮಾರ್ ಅಧಿಕಾರ ಸ್ವೀಕಾರ

Shilpa D

ಬೆಂಗಳೂರು: ಬಿಬಿಎಂಪಿ ನೂತನ ಆಯುಕ್ತರಾಗಿ ಬಿ ಎಚ್ ಅನಿಲ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿಬಿಎಂಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಆಯುಕ್ತ ಎಂ ಮಂಜುನಾಥ್ ಪ್ರಸಾದ್, ಬೆಳ್ಳಿ‌ ಬ್ಯಾಟನ್ ಅನ್ನು ಅನಿಲ್ ಕುಮಾರ್ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಮಂಜುನಾಥ್ ಪ್ರಸಾದ್ ಅವರನ್ನು ನಾಲ್ಕು ದಿನಗಳ ಹಿಂದೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ, ಆಯುಕ್ತರ ಹುದ್ದೆಗೆ ಅನಿಲ್ ಕುಮಾರ್ ಅವರನ್ನು ಈ ಹುದ್ದೆಗೆ ನಿಯೋಜಿಸಿತ್ತು. ಅನಿಲ್ ಕುಮಾರ್ ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು.

2016ರಲ್ಲಿ ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಈಗ ವರ್ಗಾವಣೆ ಮಾಡಿದ್ದರೂ, ಇದುವರೆಗೆ ಯಾವುದೇ ಹುದ್ದೆ ತೋರಿಸಿಲ್ಲ.

SCROLL FOR NEXT