ರಾಜ್ಯ

ಇಂದಿರಾ ಕ್ಯಾಂಟೀನ್ ಮುಚ್ಚೋದೂ ಇಲ್ಲ, ಹೆಸರೂ ಬದಲಾಯಿಸಲ್ಲ: ಯಡಿಯೂರಪ್ಪ ಸ್ಪಷ್ಟನೆ

Raghavendra Adiga

ಬೆಂಗಳೂರು: ಬಡವರಿಗೆ ರಿಯಾಯಿತಿ ದರದಲ್ಲಿ ಊಟ, ಉಪಹಾರ ಒದಗಿಸುವ ಉದ್ದೇಶದಿಂದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ, ಇಂದಿರಾ ಕ್ಯಾಂಟೀನ್ ಹೆಸರನ್ನು ಸಹ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿ ಯಾರೂ ಹೇಳಿಲ್ಲ. ಕ್ಯಾಂಟೀನ್ ಮುಚ್ಚುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.

ಇಂದಿರಾ ಕ್ಯಾಂಟೀನ್ ಗಳಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡದಿದ್ದರೆ ಬಿಬಿಎಂಪಿಯೇ ಕ್ಯಾಂಟೀನ್ ಗಳನ್ನು ನಡೆಸಲಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಬುಧವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ್ದರು. 

SCROLL FOR NEXT