ರಾಜ್ಯ

ಶಿಕ್ಷಕರ ವರ್ಗಾವಣೆಗೆ ತಾತ್ಕಾಲಿಕ ತಡೆ, ಸುಧಾರಿತ ಕ್ರಮದ ಜಾರಿ ಶೀಘ್ರ: ಸಚಿವ ಸುರೇಶ್ ಕುಮಾರ್ 

Raghavendra Adiga

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿರುವ ಗೊಂದಲ ನಿವಾರಣೆ ಮಾಡುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ  ಸುರೇಶ್ ಕುಮಾರ್ ತಕ್ಷಣದಿಂದ ಜಾರಿಗೆ ಬರುವಂತೆ  ಹಾಗೂ ಮುಂದಿನ ಆದೇಶದವರೆಗೆ ವರ್ಗಾವರ್ಗಿಗೆ ತಡೆ ನೀಡಿದ್ದಾರೆ.

ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಅವರು, ಶಿಕ್ಷಕರ ಕಡ್ಡಾಯ ವರ್ಗಾವಣೆ ಕುರಿತು ಅನೇಕ ಶಿಕ್ಷಕರು, ಅದರಲ್ಲಿಯೂ ಮಹಿಳೆಯರು ಮನವಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ವಿವರಿಸಿದ್ದಾರೆ. ಅಲ್ಲದೆ ಕೆಲವು ನ್ಯಾಯಯುತ ಪ್ರಸ್ತಾವನೆಗಳನ್ನು ತಮ್ಮ ಮುಂದೆ ಇಟ್ಟಿದ್ದಾರೆ. ಈ ವರ್ಗಾವಣೆ ವ್ಯವಸ್ಥೆಯಲ್ಲಿರುವ ಕೆಲವು ದೋಷಗಳನ್ನೂ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಕೆಲವು ಗೊಂದಲಗಳನ್ನು ನಿವಾರಿಸಿ, ಎಲ್ಲರಿಗೂ ಅನುಕೂಲವಾಗುವ ರೀತಿಯ ವ್ಯವಸ್ಥೆ ರೂಪಿಸುವ ಕುರಿತು ಚಿಂತನೆ ಮತ್ತು ಪ್ರಯತ್ನ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. 

ಕೇವಲ ಕೆಲವೇ ದಿನಗಳಲ್ಲಿ ನೂತನ ಹಾಗೂ ಸುಧಾರಿತ ವರ್ಗಾವಣೆ ಪ್ರಕ್ರಿಯೆ ಜಾರಿ ಮಾಡಲು ತೀರ್ಮಾನಿಸಿದ್ದೇವೆ. ಯಾರಿಗೂ ಆತಂಕ ಬೇಡ  ಎಂದು ಸಚಿವರು ತಿಳಿಸಿದ್ದಾರೆ.

SCROLL FOR NEXT