ರಾಜ್ಯ

ನೆರೆಯ ನಡುವೆಯೂ ರಾಜ್ಯದ ಐದು ಜಿಲ್ಲೆಗಳಲ್ಲಿ ಮಳೆ ಕೊರತೆ 

Nagaraja AB

ಬೆಂಗಳೂರು: ಒಂದೆಡೆ ಚುರುಕಾದ ನೈಋತ್ಯ ಮುಂಗಾರಿನಿಂದಾಗಿ ಅರ್ಧ ರಾಜ್ಯ ನೆರೆಯಲ್ಲಿ ಕೊಚ್ಚಿಕೊಂಡು ಹೋಗಿದ್ದರೆ, ಇನ್ನೊಂದೆಡೆ ಐದು ಜಿಲ್ಲೆಗಳು ಮಳೆಯ ಕೊರತೆಯನ್ನು ಎದುರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಕೇಂದ್ರ ಇಂದು  ಹೇಳಿದೆ.

ಮುಂಗಾರು ಪ್ರಾರಂಭವಾದ ನಂತರ 10 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. 15 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದ್ದು, ಐದು ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ.

ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಅತ್ಯಧಿಕ ಮಳೆಯಾಗಿದೆ.

ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರದಲ್ಲಿ ಸಾಮಾನ್ಯ ಮಳೆಯಾಗಿದೆ.

ಅಚ್ಚರಿಯೆಂಬಂತೆ ಪಕ್ಕದ ಆಂಧ್ರ, ಮಹಾರಾಷ್ಟ್ರದ ನದಿಗಳು ಉಕ್ಕಿ ಹರಿದು ನೆರೆಗೆ ತುತ್ತಾಗಿದ್ದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಮಳೆಯ ಕೊರತೆಯಾಗಿದೆ.

ರಾಜ್ಯದ ಎಲ್ಲಾ 306 ಹೊಬಳಿಗಳಲ್ಲಿ ಹೆಚ್ಚಿನ ಮಳೆಯಾಗಿದೆ, 247 ಹೊಬಳಿಗಳಲ್ಲಿ ಸಾಮಾನ್ಯವಾಗಿದೆ ಮತ್ತು 191 ಹೊಬಳಿಗಳಲ್ಲಿ ಮಳೆಯ ಕೊರತೆಯಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಟಣೆ ತಿಳಿಸಿದೆ.

SCROLL FOR NEXT