ಕೆಎಂಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ!
ತೀವ್ರ ಕೂತೂಹಲ ಮೂಡಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಚುನಾವಣೆಯಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಂಗಳೂರು: ತೀವ್ರ ಕೂತೂಹಲ ಮೂಡಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಚುನಾವಣೆಯಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಸುಮಾರು 11 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಕ್ಕೆ ನಿಂತಿದ್ದರು. ಕಾಂಗ್ರೆಸ್ ಬೆಂಬಲಿತ 6, ಜೆಡಿಎಸ್ 1, ಬಿಜೆಪಿಯ ಓರ್ವ ನಿರ್ದೇಶಕರು ಸೇರಿದಂತೆ ಮೂವರು ಅಧಿಕಾರಿಗಳು ಜಾರಕಿಹೊಳಿಗೆ ಬೆಂಬಲ ನೀಡಿದ್ದರು.
ಜುಲೈ 29 ರಂದು ನಡೆಯಬೇಕಾದ ಚುನಾವಣೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಗೆ ಈ ಅದೃಷ್ಟ ಒಲಿದು ಬಂದಿದೆ ಎಂದು ಹೇಳಲಾಗುತ್ತಿದೆ.
16 ಸದಸ್ಯ ಬಲ ಹೊಂದಿರುವ ಕೆಎಂಎಫ್ ಒಕ್ಕೂಟದಲ್ಲಿ ಕಾಂಗ್ರೆಸ್ ಬೆಂಬಲಿತ 9 ಜೆಡಿಎಸ್ ಬೆಂಬಲಿತ 3 ನಿರ್ದೇಶಕರು ಹಾಗೂ ನಾಲ್ವರು ನಾಮ ನಿರ್ದೇಶಿತ ಸದಸ್ಯರಿದ್ದಾರೆ, ಸರ್ಕಾರದಿಂದ ಬಾಲಚಂದ್ರ ಜಾರಕಿಹೊಳಿ ನಾಮ ನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.