ನವದಂಪತಿ ಆತ್ಮಹತ್ಯೆಗೆ ಯತ್ನ 
ರಾಜ್ಯ

ಬೆಂಗಳೂರು: ನವದಂಪತಿ ಆತ್ಮಹತ್ಯೆಗೆ ಯತ್ನ: ವರದಕ್ಷಿಣೆ ಕಿರುಕುಳ ಶಂಕೆ

ಇತ್ತೀಚಗಷ್ಟೇ ಮದುವೆಯಾಗಿದ್ದ ನವ ದಂಪತಿಗಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬೆಂಗಳೂರು: ಇತ್ತೀಚಗಷ್ಟೇ ಮದುವೆಯಾಗಿದ್ದ ನವ ದಂಪತಿಗಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬೆಂಗಳೂರಿನ ಗಿರಿನಗರದ ನಿವಾಸಿಗಳಾ ಬಾಲಾಜಿ ಮತ್ತು ಸೌಮ್ಯ ಎಂಬ ನವದಂಪತಿಗಳೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಸ್ಥಳೀಯರು ಮತ್ತು ಪೊಲೀಸರ ಸಮಯ ಪ್ರಜ್ಞೆ ಸಾವಿನಿಂದ ಪಾರಾಗಿದ್ದಾರೆ. ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಗಿರಿನಗರದ ಮನೆಯಲ್ಲಿ ತಡರಾತ್ರಿಯಲ್ಲಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. 

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗಳು ಮೂರು ತಿಂಗಳ ಹಿಂದಷ್ಟೇ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಕೆಲ ದಿನಗಳ ಬಳಿಕ ಕೌಟುಂಬಿಕ ಕಲಹವೇರ್ಪಟ್ಟಿತ್ತು ಎನ್ನಲಾಗಿದೆ. ಸೌಮ್ಯ ಕುಟುಂಬಸ್ಥರು ಆರೋಪಿಸಿರುವಂತೆ ಬಾಲಾಜಿ ಕುಟುಂಬಸ್ಥರು ವರದಕ್ಷಿಣಿ ಕಿರುಕುಳ ನೀಡುತ್ತಿದ್ದರು. ಇದೇ ಕಾರಣಕ್ಕೆ ಬಾಲಾಜಿ ಮತ್ತು ಸೌಮ್ಯ ಕುಟುಂಬದಿಂದ ಹೊರಬಂದು ಬೇರೆ ವಾಸಿಸುತ್ತಿದ್ದರು. ಬಾಲಾಜಿ ಅವರ ಸಹೋದರಿಯರು ಸೌಮ್ಯಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಸೌಮ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದೇ ಕಾರಣಕ್ಕೆ ದಂಪತಿಗಳು ಮನನೊಂದು ಇಬ್ಬರು‌ ಚಾಕುವಿನಿಂದ ಕತ್ತು ಕೊಯ್ದು ಕೊಂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಂಜಾನೆ 5 ಗಂಟೆಗೆ ತಮ್ಮ ಸಂಬಂಧಿಕರಿಗೆ ಕರೆ ಮಾಡಿದ್ದ ಸೌಮ್ಯ ನಾನು ಹೋಗುತ್ತಿದ್ದೇನೆ. ನನ್ನ ತಾಯಿಯನ್ನು ನೋಡಿಕೊಳ್ಳಿ ಎಂದು ಹೇಳಿದ್ದರಂತೆ. ಇದರಿಂದ ಅನುಮಾನಗೊಂಡ ಸಂಬಂಧಿಕರು ಮನೆಗೆ ದೌಡಾಯಿಸಿ ಬಂದಾಗ ದಂಪತಿಗಳು ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಸ್ಥಳೀಯರಿಂದ ಮಾಹಿತಿ ಬಂದ ಕೊಡಲ್ಲೇ ಸ್ಥಳಕ್ಕೆ ದಾವಿಸಿದ ಗಸ್ತಿನಲ್ಲಿಂದ ಗಿರಿನಗರ ಸಬ್ ಇನ್ಸ್‌ಪೆಕ್ಟರ್ ವಿನಯ್ ಮತ್ತು ಸಿಬ್ಬಂದಿ ದಂಪತಿಯನ್ನ ಕೊಡಲ್ಲೇ ಆಸ್ಪತ್ರೆ ಸೇರಿಸಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT