ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಬಗೊಂಡಿದ್ದು, ಈ ನಡುವಲ್ಲೇ, ರಾಜ್ಯದ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಕರ್ನಾಟಕ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಿ. ನಿಮ್ಮ ಮತ ಸ್ಥಿರ ಸರ್ಕಾರಕ್ಕೆ, ನಿಮ್ಮ ಮತ ಸದೃಢ ಸರ್ಕಾರಕ್ಕೆ, ಅದಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಸಂದೇಶ ನೀಡಿದ್ದಾರೆ.
ಮತದಾನ ಪ್ರತಿಯೊಬ್ಬರ ಹಕ್ಕು. ಒಂದೊಂದು ಮತವೂ ಅತ್ಯಮೂಲ್ಯ. ರಾಜ್ಯದ ಉತ್ತಮ ಪ್ರಗತಿಗಾಗಿ ತಪ್ಪದೆ ನಿಮ್ಮ ಮತ ಚಲಾಯಿಸಿ. ಅಭಿವೃದ್ಧಿಯೇ ನಮ್ಮ ಮೂಲ ಮಂತ್ರ. ನವ ಕರ್ನಾಟಕ ನಿರ್ಮಾಣವೇ ನಮ್ಮ ಧ್ಯೇಯ. ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿಸುವ ಮೂಲಕ ಸ್ಥಿರ ಸರ್ಕಾರ ರಚನೆಗೆ ಕೈಜೋಡಿಸಿ ಎಂದು ಹೇಳಿದ್ದಾರೆ.