ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 17 ವರ್ಷದ ಯುವತಿ ಆತ್ಮಹತ್ಯೆ, 5 ಮಹಿಳೆಯರು ಸೇರಿ 7ಮಂದಿ ವಿರುದ್ಧ ಕೇಸ್

ಕ್ಷುಲ್ಲಕ ಕಾರಣಕ್ಕೆ ನೆರೆಹೆೊರೆಯವರು ನಿಂದಿಸಿದ ಕಾರಣ 17 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿವೇಕ್ ನಗರದಲ್ಲಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನೆರೆಹೆೊರೆಯವರು ನಿಂದಿಸಿದ ಕಾರಣ 17 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿವೇಕ್ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ರುದ್ರಣ್ಣ ಗಾರ್ಡನ್ ನಿವಾಸಿ ರೇವತಿ  ಮೃತ ದುರ್ದೈವಿ.

ಸೋಮವಾರ ಕ್ಷುಲ್ಲಕ ಕಾರಣಕ್ಕಾಗಿ ನೆರೆಹೊರೆಯವರ ಜೊತೆ ಜಗಳವಾಡಿಕೊಂಡಿದ್ದಳು, ಸಂಜೆ ಮನೆಗೆ ಬಂದ ಪಕ್ಕದ ಮನೆಯವರು ಆಕೆಯ ನಡತೆಯ ಬಗ್ಗೆ ಮಾತನಾಡಿದ್ದರು. 

ಇದರಿಂದ ಮನನೊಂದ ಯುವತಿ ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು,  ನಂತರ ಆಕೆಯ ಸಂಬಂಧಿಕರು ಆಸ್ಪತ್ರೆಗೆ ಸೇರಿಸಿದ್ದರು, ಆದರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಳು. 

ತಕ್ಷಣವೇ ಆಕೆಯ ಪೋಷಕರು  ವಿವೇಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ರೋಜಾ, ಚೇತು, ಆಕಾಶ್, ದೀಪಾ, ಅಭಿನಯ, ಬೀನಾ ಮತ್ತು ಇಳಂ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ